ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರ ದಾಳಿ: ಗಾಂಜಾ ಸಮೇತ ವ್ಯಕ್ತಿ ಬಂಧನ

ಯಲ್ಲಾಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಇಲ್ಲಿನ ಸಾತನಕೊಪ್ಪ ಕ್ರಾಸ್ ಬಳಿ ಪೊಲೀಸರು ಬಂಧಿಸಿದ್ದಾರೆ. ಯಲ್ಲಾಪುರ ತಾಲ್ಲೂಕಿನ ಮದ್ದೂರು ಸಮೀಪದ ಮಾದೇವಕೊಪ್ಪದ ತೊಂಡು ವಿಟ್ಟು ವಿಜುಕ್ಲೆ ಬಂಧಿತ ವ್ಯಕ್ತಿ ಎಂದು ತಿಳಿದುಬಂದಿದೆ. ಬಂಧಿತ ಆರೋಪಿ ಸಾತನಕೊಪ್ಪ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ.

ಈ ವೇಳೆ ಪೊಲೀಸರು ದಾಳಿ ನಡೆಸಿ ಗಾಂಜಾ ಸಮೇತ ಆತನನ್ನು ಬಂಧಿಸಿದ್ದಾರೆ. ಬಂಧಿತನಿoದ 35.4ಗ್ರಾಂ ಗಾಂಜಾ ಮತ್ತು 300 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version