Follow Us On

WhatsApp Group
Focus News
Trending

ಅಕ್ಟೋಬರ್ 16 ರಂದು ದಿನಕರ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ: ಸಚಿವರು, ಶಾಸಕರು ಭಾಗಿ

ಅಂಕೋಲಾ : ತಾಲೂಕಿನ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾಗಿ,ಹತ್ತಾರು ವಿಧಾಯಕ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ದಿನಕರ ವೇದಿಕೆ ವತಿಯಿಂದ,ದಿನಕರ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

ಈ ಕುರಿತು ಪಟ್ಟಣದ ಖಾಸಗಿ ಹೋಟೆಲಿನಲ್ಲಿ ಶನಿವಾರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೇದಿಕೆಯ ಅಧ್ಯಕ್ಷ ರವೀಂದ್ರ ಕೇಣಿ, ಅ.16ರಂದು ಪಟ್ಟಣದ ಪಿ.ಎಂ.ಜ್ಯೂನಿಯರ ಕಾಲೇಜು ಸಭಾಭವನದಲ್ಲಿ ಬೆಳಿಗ್ಗೆ 9.30 ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ನಾಡಿನ ಖ್ಯಾತ ನಾಟಿ ವೈದ್ಯ ಹನುಮಂತ ಗೌಡ ಬೆಳಂಬಾರ ಇವರಿಗೆ ದಿನಕರ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಜ್ಯ ಕಾರ್ಮಿಕ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಉದ್ಘಾಟಿಸಲಿದ್ದು , ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಪಂ. ಮಾಜಿ ಅಧ್ಯಕ್ಷ ರಮಾನಂದ ನಾಯಕ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿ,ಕಾರ್ಯಕ್ರಮಕ್ಕೆ ಸರ್ವರನ್ನು ಆಮಂತ್ರಿಸಿದರು.

ಕಾರ್ಯಾಧ್ಯಕ್ಷ ಸಂತೋಷ ನಾಯಕ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸಂದೇಶ ಉಳ್ಳಿಕಾಶಿ, ಪದಾಧಿಕಾರಿ ಎಮ್.ಎಮ್.ಕರ್ಕಿಕರ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ರವಿ ಪೂಜಾರಿ ವಂದಿಸಿದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button