ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಬಸ್: ಬೈಕ್ ಸವಾರ ಸಾವು

ಹೊನ್ನಾವರ: ಬೈಕ್ ಸವಾರನಿಗೆ ಸಾರಿಗೆ ಇಲಾಖೆಯ ಬಸ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೊನ್ನಾವರ ತಾಲೂಕಿನ ಹಳದೀಪುರ ಕುದಬೈಲ್ ಕ್ರಾಸ್ ಸಮೀಪ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಗಣಪತಿ ಅನಂತ ನಾಯ್ಕ (77) ಸಂಕೊಳ್ಳಿ ಎಂದು ಗುರುತಿಸಲಾಗಿದೆ.

ಬೈಕ್ ಸವಾರ ರಾಷ್ಟ್ರೀಯ ಹೆದ್ದಾರಿಯಿಂದ ಒಳ ರಸ್ತೆಗೆ ಹೊರಳಿಕೊಳ್ಳುವ ಯತ್ನದಲ್ಲಿರುವಾಗ ಈ ದುರ್ಘಟನೆ ನಡೆದಿದೆ. ಎದುರಿನಿಂದ ವೇಗವಾಗಿ ಬರುತ್ತಿದ್ದ ಚಿಕ್ಕಮಗಳೂರು, ಕಾರವಾರ ಬಸ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದು, ಆದರೆ ಬೈಕ್ ಸವಾರ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version