Follow Us On

WhatsApp Group
Focus News
Trending

ಹಿಂದೂ ಭಾವನೆಗಳಿಗೆ ಧಕ್ಕೆ ಆರೋಪ : ಅಮೀರ್ ಖಾನ್ ನಟಿಸಿರುವ ಜಾಹೀರಾತು ವಿರುದ್ಧ ಸಂಸದ ಅನಂತ್ ಕುಮಾರ್ ಗರಂ

ಬಾಲಿವುಡ್ ಸಿನಿಮಾ ನಟ ಅಮೀರ್ ಖಾನ್ ಅವರು ಜಾಹಿರಾತು ಒಂದರಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂಬ ಮನವಿ ಮಾಡಿದ್ದು, ಈ ಒಂದು ವಿಷಯದ ಕುರಿತಾಗಿ ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಸಂಸದರಾದ ಅನಂತಕುಮಾರ ಹೆಗಡೆ ಅವರು ಕಿಡಿಕಾರಿದ್ದಾರೆ. ಹೌದು..ಜಾಹೀರಾತು ಒಂದರಲ್ಲಿ ಅಭಿನಯಿಸಿದ ಅಮಿರ್‌ಖಾನ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿದಿರಿ ಎಂದಿದ್ದು, ಈ ಕುರಿತಾಗಿ ಜಾಹೀರಾತು ನೀಡಿರುವ ಸಿಯೆಟ್ ಕಂಪನಿಗೆ ಪತ್ರವನ್ನು ಬರೆಯುವ ಮೂಲಕ ಅನಂತಕುಮಾರ ಹೆಗಡೆಯವರು ತಮ್ಮ ಆಕ್ಷೇಪ ಹೊರಹಾಕಿದ್ದಾರೆ.

ಹಿಂದುಗಳ ಆಚರಣೆಗಳನ್ನು ಹೀಯಾಳಿಸುವುದೊಂದೆ ಇವರ ಕೆಲಸವೇ?. ಪರಿಸರವಾದಿ, ಪ್ರಾಣಿಪ್ರೇಮಿ ಆಮೀರ್ ಖಾನ್ ಅಭಿನಯಿಸಿರುವ ಜಾಹೀರಾತು ಒಂದರಲ್ಲಿ ದೀಪಾವಳಿ ಹಬ್ಬದಲ್ಲಿ ಹಿಂದುಗಳಿಗೆ ಪಟಾಕಿ ಸಿಡಿಸದಂತೆ ಮನವಿಮಾಡಿದ್ದಾರೆ. ಅವರು ಪರಿಸರ ಹಾಗೂ ಪ್ರಾಣಿಗಳ ಬಗ್ಗೆ ತೋರುತ್ತಿರುವ ಕಾಳಜಿಗೆ ನನ್ನ ಮೆಚ್ಚುಗೆ! ಅದರಂತೆ ಅನ್ಯಧರ್ಮಗಳಲ್ಲಿ ನಡೆಯುವ ಎಷ್ಟೋ ಆಚರಣೆಗಳ ಬಗ್ಗೆ ಏಕೆ ಮೌನ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಪ್ರತಿದಿನ ಬೆಳಗ್ಗೆ ಚೀರುವ ಧ್ವನಿವರ್ಧಕಗಳು, ರಸ್ತೆಗಳ ಮಧ್ಯದಲ್ಲಿ ನಮಾಜ್ ಮಾಡುವುದು ಸೇರಿದಂತೆ ಇನ್ನು ಎಷ್ಟೋ ಆಚರಣೆಗಳನ್ನು ಅಮೀರ್ ಖಾನ್ ಗಮನ ಹರಿಸಿದರೆ ಎಷ್ಟೋ ಸಮಸ್ಯೆಗಳು ಬಗೆಹರಿಯುತ್ತವೆ. ಅಂದಹಾಗೆ ಈ ರೀತಿಯ ಜಾಹೀರಾತುಗಳು ಹಿಂದುಗಳ ಭಾವನೆಗಳನ್ನು ತುಳಿಯಲು ಮಾಡಿದ ಕ್ಷುಲಕ ಕುತಂತ್ರವಲ್ಲದೆ ಮತ್ತೇನೂ ಆಗಿರುವುದಿಲ್ಲ. ಅಂತೆಯೇ ಭಾರತದಲ್ಲಿ ಇಂತಹ ಹಿಂದೂ ವಿರೋಧಿಗಳಿಗೇನು ಕಮ್ಮಿಯಿಲ್ಲ.

ಈ ಜಾಹಿರಾತನ್ನು ಅನಂತ ವರಧಾನ್ ಗೋಯೆಂಕ ಮಾಲೀಕತ್ವದ ಸಿಯೆಟ್ ಸಂಸ್ಥೆಯು ಪ್ರಸ್ತುತ ಪಡಿಸಿದ್ದು, ಈ ಕೂಡಲೇ ಈ ಜಾಹೀರಾತನ್ನು ಹಿಂಪಡೆಯಬೇಕು ಹಾಗೂ ಹಿಂದೂಗಳೇ ಆಗಿರುವ ಅವರು ಹಿಂದುಗಳ ಭಾವನೆಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕಾಗಿ ಸಂಸದ ಅನಂತಕುಮಾರ ಹೆಗಡೆ ಅವರು ಪತ್ರದ ಮೂಲಕ ಆಗ್ರಹಿಸಿದ್ದಾರೆ. ಅಂತಯೇ ಈ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿಯೂ ಬರೆದುಕೊಂಡಿದ್ದಾರೆ.

ಬ್ಯುರೋ ರಿಪೋರ್ಟ್, ವಿಸ್ಮಯ ನ್ಯೂಸ್.

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದು.

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button