Join Our

WhatsApp Group
Info
Trending

ಮಿರ್ಜಾನಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ವೈದ್ಯಕೀಯ ಕೊಠಡಿ ಶುಭಾರಂಭ: ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರಿಂದ ಉದ್ಛಾಟನೆ

ಕುಮಟಾ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ , ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಮೆಡಿಕಲ್ ರೂಮ್ ಉದ್ಘಾಟಿಸಲಾಯಿತು. ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರು ಜ್ಯೋತಿ ಬೆಳಗಿಸುವುದರ ಮೂಲಕ ಮೆಡಿಕಲ್ ರೂಮ್ ಉದ್ಘಾಟಿಸಿದರು.

ಈ ವೇಳೆ ಪ್ರಥಮ ಚಿಕಿತ್ಸೆಗೆ ಅಗತ್ಯವಾದ ಪರಿಕರಗಳ ಬಗ್ಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿಗಳು ನಿಯಮಿತವಾಗಿ ಆಗಾಗ ರಕ್ತದೊತ್ತಡ, ದೇಹದ ತೂಕ, ಟೆಂಪರೇಚರನ್ನು ಇಲ್ಲಿ ಪರೀಕ್ಷಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಶಾಲಾ ಸಿಬ್ಬಂದಿಗಳ ರಕ್ತದೊತ್ತಡ, ತೂಕ, ಟೆಂಪರೇಚರ್ ಪರೀಕ್ಷಿಸಲಾಯಿತು. ಸಂಸ್ಥೆಯ ಪ್ರಾಚಾರ್ಯರಾದ ಶ್ರೀಮತಿ ಲೀನಾ ಗೊನೇಹಳ್ಳಿಯವರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Check Also
Close
Back to top button