Join Our

WhatsApp Group
Info
Trending

ಬಿ.ಇಡಿ. ಯಲ್ಲಿ ಪ್ರಥಮ ರ‍್ಯಾಂಕ್‌ನೊoದಿಗೆ 5 ಚಿನ್ನದ ಪದಕ: ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಯ ಸಾಧನೆ

ಕುಮಟಾ :ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ 70 ಮತ್ತು 71ನೇ ಘಟಿಕೋತ್ಸವ ಸಮಾರಂಭದಲ್ಲಿ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ ಕುಮಟಾದ ಭವ್ಯಾ ಎಂ. 2017-18ನೇ ಸಾಲಿನಲ್ಲಿ ಬಿ.ಇಡಿ. ಯಲ್ಲಿ ಪ್ರಥಮ ರ‍್ಯಾಂಕ್‌ನೊoದಿಗೆ 5 ಚಿನ್ನದ ಪದಕವನ್ನು ಪಡೆದಿರುತ್ತಾರೆ. ಭವ್ಯಾ ಎಂ. ರವರು ಹೊನ್ನಾವರ ತಾಲೂಕಿನ ಖರ್ವಾದ ಮೋಹನ ಭಂಡಾರಿ ಮತ್ತು ಗೌರಿ ಭಂಡಾರಿ ದಂಪತಿಯ ಮಗಳು.

ಪ್ರಸ್ತುತ ದಾವಣಗೆರೆಯಲ್ಲಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭವ್ಯಾ ಎಂ. ರವರ ಸಾಧನೆಯನ್ನು ಕೆನರಾ ಕಾಲೇಜ್ ಸೊಸೈಟಿಯ ಅಧ್ಯಕ್ಷರಾದ ಶ್ರೀ. ರಘು ಪಿಕಳೆ, ಕಾರ್ಯಾಧ್ಯಕ್ಷರಾದ ಶ್ರೀ. ದಿನಕರ ಎಮ್. ಕಾಮತ, ಕಾರ್ಯದರ್ಶಿಗಳಾದ ಶ್ರೀ ಸುಧಾಕರ ವಿ. ನಾಯಕ, ಪ್ರಾಚಾರ್ಯರಾದ ಡಾ. ಪ್ರೀತಿ ಭಂಡಾರಕರ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Check Also
Close
Back to top button