ಶಿರಸಿ: ತಿಮಿಂಗಿಲದ ವಾಂತಿಗೆ ಅತ್ಯಂತ ಬೇಡಿಕೆಯಿದೆ. ವಿದೇಶದಲ್ಲಿ ಕಡಲಿಗೆ ತೆರಳಿದೆ ವೇಳೆ, ಸಮುದ್ರ ತೀರಕ್ಕೆ ವಾಕಿಂಗ್ ಗೆ ತೆರಳಿದ ವೇಳೆ, ತಿಮಿಂಗಿಲದ ವಾಂತಿ ಸಿಕ್ಕಿ, ರಾತ್ರೋರೋತ್ರಿ ಕೋಟ್ಯಾಧೀಶರಾದವರು ಹಲವರಿದ್ದಾರೆ. ನಮ್ಮ ದೇಶದಲ್ಲಿ ಈ ಅಪರೂಪದ ವಸ್ತು ಸಿಗುವುದು ವಿರಳಾತೀ ವಿರಳ ಅಂತಾನೇ ಹೇಳ್ಬೇಕು.
ಕೆಲ ದೇಶದಲ್ಲಿ ಇದನ್ನು ಮಾರಾಟ ಮಾಡಬಹುದು, ಆದರೆ, ನಮ್ಮ ದೇಶದಲ್ಲಿ ಇದನ್ನು ಮಾರುವಂತಿಲ್ಲ. ಪ್ರಮುಖವಾಗಿ ಇದನ್ನು ಸುಗಂಧ ದ್ರವ್ಯ ಉತ್ಪಾದನೆಯಲ್ಲಿ ಬಳಸಲಾಗುತ್ತದೆ. ಹೀಗಾಗಿ ಪಾಶ್ಚಿಮಾತ್ಯ ರಾಜ್ಯದಲ್ಲಿ ಇದಕ್ಕೆ ಒಂದು ಕೆಜಿಗೆ ಕೋಟಿ ಬೆಲೆ ಇದೆ. ಹೌದು, ಸುಮಾರು ಐದು ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬೆಳಕಿಗೆ ಬಂದಿದೆ.
ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿ, ಅವರಿಂದ ಐದು ಕೋಟಿ ಮೌಲ್ಯದ ಐದು ಕೆಜಿ ತಿಮಿಂಗಿಲದ ವಾಂತಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಮೂಲದ ಸಂತೋಷ್ ಕಾಮತ್ ,ಶಿರಸಿಯ ರಾಜೇಶ್ ಪೂಜಾರಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಈ ಬೆಲೆಬಾಳುವ ತಿಮಿಂಗಿಲದ ವಾಂತಿಯನ್ನು ಎಲ್ಲಿಂದ ತಂದರು? ಅಥವಾ ಮಾರಾಟ ಮಾಡುವ ಯೋಜನೆ ರೂಪಿಸಿದ್ದಾರೆ? ಎನ್ನುವುದು ಇನ್ನು ತಿಳಿದುಬಂದಿಲ್ಲ. ತನಿಖೆಯಿಂದ ತಿಳಿದುಬರಬೇಕಿದೆ.
ಈ ವಾಂತಿಗೆ ಇಷ್ಟೊಂದು ಬೆಲೆ ಯಾಕೆ? ತಿಮಿಂಗಲದ ವಾಂತಿಯನ್ನು ಸುಗಂಧದ್ರವ್ಯ ತಯಾರಿಕೆಯಲ್ಲಿ ಬಳಸುತ್ತಾರಂತೆ. ಇದಕ್ಕೆ ವಿಪರೀತ ಬೇಡಿಕೆಯಿದ್ದು, ಅಪಾರ ಬೆಲೆಯಿದೆ ಎನ್ನಲಾಗಿದೆ. ಕೆಲದಿನಗಳ ಹಿಂದೆ ವಿಶ್ವಪ್ರಸಿದ್ಧ ಪ್ರವಾಸಿ ತಾಣದ ಮುರ್ಡೇಶ್ವರದ ಕಡಲತೀರದಲ್ಲಿ ಇಂತದೊoದು ವಸ್ತು ದೊರೆತಿದ್ದು, ಚರ್ಚೆಗೆ ಗ್ರಾಸವಾಗಿತ್ತು. ಸಮುದ್ರದಲ್ಲಿ ಸಿಕ್ಕ ಈ ಅಪರೂಪದ ವಸ್ತುವನ್ನು ಮೀನುಗಾರ ಪೊಲೀಸರಿಗೆ ಒಪ್ಪಿಸಿದ್ದ.
ವಿಸ್ಮಯ ನ್ಯೂಸ್, ಕಾರವಾರ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537