Important
Trending

ಅಧಿಕಾರಿಗೆ ಲಂಚ ನೀಡಲು ಕಚೇರಿ ಆವರಣದಲ್ಲೇ ಭಿಕ್ಷೆ ಬೇಡಿದ ವ್ಯಕ್ತಿ: ವಿನೂತನ ಪ್ರತಿಭಟನೆ ಹೇಗಿತ್ತು ನೋಡಿ?

ಪಹಣಿ ಪತ್ರಿಕೆ ತಿದ್ದುಪಡಿಗೆ ಲಂಚ ಕೇಳಿದ್ದ ಅಧಿಕಾರಿ

ಕೆಲಸ ಮಾಡಿಕೊಡಲು ಲಂಚ ಕೇಳಿದ ಅಧಿಕಾರಿಗೆ ಈ ವ್ಯಕ್ತಿ ವಿಭಿನ್ನವಾಗಿ ಪ್ರತಿಭಟಿಸಿ, ಮನಪರಿವರ್ತನೆ ಮಾಡಲು ಮುಂದಾಗಿದ್ದಾನೆ. ಲಂಚದ ಮೊತ್ತವನ್ನು ಸಂಗ್ರಹಿಸಲು ಕಚೇರಿಯ ಆವಾರದಲ್ಲಿಯೇ ಭಿಕ್ಷೆ ಬೇಡಿ, ಲಂಚದ ಮೊತ್ತವನ್ನು ಸಂಗ್ರಹಿಸಿದ್ದು, ಅಧಿಕಾರಿಗಳನ್ನು ಎಚ್ಚರಿಸುವ ಪ್ರಯತ್ನ ಮಾಡಿ ಗಮನಸೆಳೆದಿದ್ದಾನೆ.

ಯಲ್ಲಾಪುರ: ಸಾರ್ವಜನಿಕ ಕೆಲಸ ಮಾಡಿಕೊಡಲು ಲಂಚ ಬಯಸಿದ ಅಧಿಕಾರಿಯ ಮನಪರಿವರ್ತನೆ ಮಾಡುವುದಕ್ಕಾಗಿ ವ್ಯಕ್ತಿಯೊಬ್ಬರು ಜನರಿಂದ ಬಿಕ್ಷೆ ಬೇಡಿ ಹಣ ನೀಡಲು ಮುಂದಾದ ಘಟನೆ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಭಷ್ಟಾಚಾರದ ಕುರಿತು ಹೋರಾಟ ಮಾಡುವುದಕ್ಕಿಂತ ಮೊದಲು ಅಧಿಕಾರಿಗಳ ಮನ ಪರಿವರ್ತನೆ ಮಾಡುವುದು ಮುಖ್ಯ ಎಂದು ಭಾವಿಸಿ ಜನರಿಂದ ಬಿಕ್ಷೆ ಬೇಡಿ ಅಧಿಕಾರಿಯ ಬೇಡಿಕೆ ಪೂರೈಸಲು ನಿರ್ಧರಿಸಿದ್ದಾರೆ ಈ ವ್ಯಕ್ತಿ.

ಹೌದು, ತಟಗಾರ ಗ್ರಾಮದ ಸರ್ವೆ ನಂ 12ರಲ್ಲಿನ ಕ್ಷೇತ್ರವನ್ನು ಉಪ ನೋಂದಣಾಧಿಕಾರಿ ಕಚೇರಿ ಮೂಲಕ ಗಜಾನನ ಭಟ್ಟ ಹಾಗೂ ನಾರಾಯಣ ಭಟ್ಟ ಎಂಬ ಸಹೋದರರಿಬ್ಬರು ವಿಭಾಗ ಮಾಡಿಕೊಂಡಿದ್ದರು. ಇದನ್ನು ಪಹಣಿ ಪತ್ರಿಕೆಯಲ್ಲಿ ದಾಖಲು ಮಾಡಲು ಕಂದಾಯ ಇಲಾಖೆ ಅಧಿಕಾರಿಯೊಬ್ಬರು 2 ಸಾವಿರ ರೂ ಬೇಡಿಕೆ ಇಟ್ಟಿದ್ದರು. ಹೀಗಾಗಿ ಗಜಾನನ ಭಟ್ಟ ಅವರ ಪುತ್ರ ಅಚ್ಯುತಕುಮಾರ ಎಂಬಾತರು ಮಂಗಳವಾರ ಸಾರ್ವಜನಿಕರಿಂದ ಬಿಕ್ಷೆ ಬೇಡಿ ಅಧಿಕಾರಿಗೆ ಅವರು ಬಯಸಿದ ಹಣ ನೀಡಲು ಮುಂದಾದರು.

ಅಚ್ಯುತಕುಮಾರ ಅವರು ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ ಟಿವಿ ಕಡ್ಡಾಯ ಮಾಡಬೇಕು ಎಂದು ಮೂರು ವರ್ಷದ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದರು. ಜಿಲ್ಲಾಡಳಿತ ಆ ವೇಳೆ ಸರ್ಕಾರಿ ಕಚೇರಿಗಳಲ್ಲಿ ಸಿಸಿ ಟಿವಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಎಲ್ಲಾ ಕಚೇರಿಗಳಲ್ಲಿ ಆ ಆದೇಶ ಇನ್ನೂ ಅನುಷ್ಠಾನ ಆಗಿಲ್ಲ.

ಈ ಆದೇಶದ ಅನ್ವಯ ಯಲ್ಲಾಪುರದ ತಹಶೀಲ್ದಾರ್ ಕಚೇರಿಯ ಎಲ್ಲಡೆ ಸಿ.ಸಿ ಟಿವಿ ಅಳವಡಿಸುವಂತೆ ಅವರು ತಹಶೀಲ್ದಾರ್ ಶ್ರೀಕೃಷ್ಣ ಕಾಮೇಕರ್ ಅವರಿಗೆ ಮನವಿ ಮಾಡಿದರು. ತಹಶೀಲ್ದಾರ್ ಶ್ರೀಕೃಷ್ಣ ಕಾಮೇಕರ್ ಅವರು ಮನವಿಗೆ ಪೂರಕವಾಗಿ ಸ್ಪಂದಿಸಿದರು.

ಭೃಷ್ಟಾಚಾರ ತಡೆಗೆ ಸರ್ಕಾರಿ ಕಚೇರಿಯ ಎಲ್ಲಡೆ ಸಿ.ಸಿ ಟಿವಿ ಕಡ್ಡಾಯ ಆಗಬೇಕು. ಈ ಕುರಿತು ಜಿಲ್ಲಾಡಳಿತ ಆದೇಶ ಹೊರಡಿಸಿದ್ದರೂ ಪಾಲನೆಯಾಗಿಲ್ಲ. ಪ್ರಸ್ತುತ ಜನರಿಂದ ಸ್ವೀಕೃತವಾದ 136 ರೂ ಅನ್ನು ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪೃಕೃತಿ ವಿಕೋಪ ನಿಧಿಗೆ ನೀಡಲಾಗುವುದು ಎಂದು ಅಚ್ಯುತಕುಮಾರ್ ಮಾಹಿತಿ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button