Important
Trending

ಮಹಿಳೆ ಹೊಟ್ಟೆಯಿಂದ 7 ಕೆಜಿ ಗೆಡ್ಡೆ ಹೊರ ತೆಗೆದ ಭಟ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು

ಭಟ್ಕಳ: ಕರೊನಾ ಲಾಕ್ ಡೌನ್ ನಂತರ ಭಟ್ಕಳ ಸರ್ಕಾರಿ ಆಸ್ಪತ್ರೆ ಮತ್ತೆ ಸಾರ್ವಜನಿಕ ಸೇವೆಗೆ ಲಭ್ಯವಾಗಿದ್ದು ಮಹಿಳೆಯೊರ್ವರ ಹೊಟ್ಟೆಯಲ್ಲಿರುವ ಸುಮಾರು 7 ಕೆಜಿ ಗಡ್ಡೆಯನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಹೊರತೆಗೆದಿದ್ದು ಮಹಿಳೆಯನ್ನು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಲೂಕಿನ ಆಸರಕೇರಿ ನಿವಾಸಿ ಮಹಿಳೆಯೊರ್ವರು ಕಳೆದ 7 ದಿನಗಳ ಹಿಂದೆ ಹೊಟ್ಟೆನೋವು ಮತ್ತು ತೀವ್ರ ರಕ್ತಸ್ರಾವದಿಂದ ಹಿನ್ನೆಲೆಯಲ್ಲಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಪರೀಕ್ಷಿಸಿದ ವೈದ್ಯ ಡಾ ಶಾಮ್ಸನೂರ್ ಹೊಟ್ಟೆಯಲ್ಲಿ ಟ್ಯುಮರ್ ಗಡ್ಡೆಯಾಗಿರುವದನ್ನು ಪತ್ತೆ ಹಚ್ಚಿದ್ದರು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಗೆ ಅಂದು ತಾತ್ಕಾಲಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದ್ದು ಶಸ್ತ್ರ ಚಿಕಿತ್ಸೆ ನಡೆಸಿ ಮಹಿಳೆಯ ಹೊಟ್ಟೆಯಲ್ಲಿರುವ 7 ಕೆಜಿ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮಾಡಿ ಹೊರತೆಗೆದಿದ್ದರೆ.ಚಿಕಿತ್ಸೆಯ ಬಳಿಕ ಮಹಿಳೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಆಡಳಿತ ವೈದ್ಯಾಧಿಕಾರಿ ಡಾ.ಸವಿತಾ ಕಾಮತ ಅರವಳಿಕೆ ನೀಡಿ ಆಫರೇಶನ್ ಮಾಡಲು ಸಹಕರಿಸಿದರು.

-ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ, ಭಟ್ಕಳ

Back to top button