ಕಾರವಾರ: ಅಪಘಾತದಲ್ಲಿ ಗಾಯಗೊಂಡ ಮಹಿಳೆಯೊಬ್ಬಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಜಿಲ್ಲಾಸ್ಪತ್ರೆಯಲ್ಲಿನ ವೆಂಟಿಲೇಟರ್ ವಾಹನಕ್ಕೆ ಚಾಲಕರಿಲ್ಲದೇ ಎರಡು ಗಂಟೆಗಳ ಕಾಲ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದಾಗಿ ಸ್ಥಳೀಯ ಸಾರ್ವಜನಿಕರು ಆಸ್ಪತ್ರೆಗೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಮಹಿಳೆಯೊಬ್ಬಳು ಕಾರವಾರದ ಸರ್ವೋದಯ ನಗರದ ಕಮಲಾ ನಗರದ ದಿವೇಕರ ಕಾಲೇಜ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಪಘಾತದಲ್ಲಿ ಗಾಯಗೊಂಡಿದ್ದಳು. ಈ ವೇಳೆ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಈ ವೇಳೆ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಒಂದು ಗಂಟೆಯೊಳಗಾಗಿ ಬಾಂಬೋಲಿಗೆ ಒಯ್ಯುವಂತೆ ಹೇಳಿದ್ದರು.
ಆದರೆ ಗಂಭೀರ ಸ್ವರೂಪದ ಗಾಯಗಳಾಗಿದ್ದ ಮಹಿಳೆಗೆ ವೆಂಟಿಲೇಟರ್ ಹೊಂದಿದ್ದ ಆಂಬ್ಯುಲೆನ್ಸ್ ಬೇಕಾಗಿದ್ದರಿಂದ ಆಸ್ಪತ್ರೆಯಲ್ಲಿ ವಾಹನ ಇದ್ದರೂ ಚಾಲಕರಿರಲಿಲ್ಲ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಹರಸಾಹಸ ಪಡುವಂತಾಯಿತು. ಇದಕ್ಕಾಗಿ ಆಸ್ಪತ್ರೆ ಆವರಣದಲ್ಲಿ ಸೇರಿದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಕೆಲ ಸಮಯದ ನಂತರ ಆಂಬ್ಯುಲೆನ್ಸ್ ಚಾಲಕ ಬಂದ ಹಿನ್ನೆಲೆಯಲ್ಲಿ ಮಹಿಳೆಯನ್ನು ವೆಂಟಿಲೇಟರ್ ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ರೀತಿಯ ಸಮಸ್ಯೆಯನ್ನು ಬಗೆಹರಿಸಬೇಕೆಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬಂದಿದೆ.
ವಿಸ್ಮಯ ನ್ಯೂಸ್, ಕಾರವಾರ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537