ಮಾಹಿತಿ
Trending

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ಹೊನ್ನಾವರ: ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು ಮತ್ತು ಶಾರದಾ ಪೂಜೆ ಹಾಗೂ ಶಾಲಾ ವಾಹನ ಪೂಜೆಯನ್ನು ನೆರವೇರಿಸಲಾಯಿತು. ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಉಮೇಶ ವಿ ಹೆಗಡೆ ಮತ್ತು ಭಾರತೀ ಎಜ್ಯುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷರಾದ ವಿನಯ್ ಭಟ್ ಸೂರಿ ಅವರು ಉಪಸ್ಥಿತತರಿದ್ದರು.

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯಾಧ್ಯಾಪಕಿಯರಾದ ವೈಲೆಟ್ ಫರ್ನಾಂಡಿಸ್, ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಕ್ಕಳಿಂದ ವಿವಿಧ ಮನರಂಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ವಿಸ್ಮಯ ನ್ಯೂಸ್, ಹೊನ್ನಾವರ

Back to top button