ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರಿ ಗೌಡ ಅವರು ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಈ ವೇಳೆ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಸುಕ್ರಿ ಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ, ಕ್ರೀಮ್ಸ್ ನಿರ್ದೇಶಕ ಗಜಾನನ ನಾಯಕ, ಸ್ಥಳೀಯ ಮುಖಂಡ ಗಣಪತಿ ಉಳ್ಳೋಕರ್ ಮುಂತಾದವರು ಇದ್ದರು.
ವಿಸ್ಮಯ ನ್ಯೂಸ್, ಕಾರವಾರ