ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಮಾಂಗಲ್ಯ ಸರ ಕದ್ದ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಿದ ಪೊಲೀಸರು

ಶಿರಸಿ: ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಮಾಂಗಲ್ಯ ಸರ ಕದ್ದ ಆರೋಪಿಗಳನ್ನು ಕೇವಲ 24 ಗಂಟೆಯಲ್ಲಿ ಶಿರಸಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಬಂದು ದುಷ್ಕರ್ಮಿಗಳು ದಾರಿ ಕೇಳುವ ನೆಪ ಮಾಡಿಕೊಂಡು, ಮಹಿಳೆಯ ಚಿನ್ನದ ಸರ ಕದ್ದು ಪರಾರಿಯಾಗಿದ್ದರು. ನಗರದ ಭತ್ತದ ಓಣಿಯಲ್ಲಿ ನಡೆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಳ್ಳರ ಶೋಧನೆಗೆ ವಿಶೇಷ ತಂಡ ರಚಿಸಿದ್ದರು.

ಇದೀಗ ಪೊಲೀಸರು ಧಾರವಾಡದ ಮೃತ್ಯುಂಜಯ ಪೂಜಾರ ಹಾಗೂ ಹಾವೇರಿ ಮೂಲದ ರಾಘವೇಂದ್ರ ಬೆಳವಗಿ ಎಂಬುವವರನ್ನು ಧಾರವಾಡದಲ್ಲಿ ಬಂಧಿಸಿದ್ದಾರೆ. ಬಂಧಿತರಿoದ 25 ಗ್ರಾಂ. ತೂಕದ ಚಿನ್ನದ ಸರ ಮತ್ತು 4 ಮೊಬೈಲ್ ಹಾಗೂ ಕಾರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಉಷಾ ದಾಮೋದರ ಪೈ ಎನ್ನುವ ವೃದ್ದೆಯ ಬಳಿ ಕುಮಟಾಕ್ಕೆ ತೆರಳುವ ಮಾರ್ಗ ಕೇಳುವ ನೆಪ ಮಾಡಿಕೊಂಡು ಕುತ್ತಿಗೆಯಲ್ಲಿದ್ದ ಸರ ಹರಿದು ಪರಾರಿಯಾಗಿದ್ದರು. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version