Jannah Theme License is not validated, Go to the theme options page to validate the license, You need a single license for each domain name.
Uttara Kannada
Trending

ಬೈಕ್ ಸ್ಕಿಡ್ ಆಗಿ ಗಟಾರಕ್ಕೆ ಬಿದ್ದು ಸ್ಥಳದಲ್ಲೇ ಇಬ್ಬರ ಸಾವು


ಕುಮಟಾ: ಕುಮಟಾ ತಾಲೂಕಿನ ಹೊಸ ಹೆರವಟ್ಟಾ ಬಳಿ ಬೈಕ್ ಸ್ಕಿಡ್ ಆಗಿ ಗಟಾರಕ್ಕೆ ಬಿದ್ದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಹೊಸಹೆರವಟ್ಟಾ ಬಳಿ ಬೈಕ್ ಸವಾರನೋರ್ವ ಬೈಕನ್ನು ಅತಿ ವೇಗವಾಗಿ ಚಲಾಯಿಸುತ್ತಿದ್ದಾಗ ನಿಯಂತ್ರಣಕ್ಕೆ ಬಾರದೆ ಬೈಕ್ ಸ್ಕಿಡ್ ಆಗಿ ಹೆದ್ದಾರಿಯ ಪಕ್ಕದಲ್ಲಿರುವ ಗಟಾರದಲ್ಲಿ ಬಿದ್ದಿದೆ.

ಮೃತ ಬೈಕ್ ಸವಾರ ನಾಗರಾಜ ಮಂಜುನಾಥ ಮಡಿವಾಳ ಹಾಗೂ ಹಿಂಬದಿಯಲ್ಲಿ ಕುಳಿತಿದ್ದ ಸಂಜಯ ಪಾವಸ್ಕರ್ ಎಂದು ಗುರುತಿಸಲಾಗಿದೆ. ಬಿದ್ದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button