Focus News
Trending

ಸಿಡಿಲು ಬಡಿದು ಮೃತಪಟ್ಟ ಮಹಿಳೆಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ ಶಿವರಾಮ್ ಹೆಬ್ಬಾರ್

ಯಲ್ಲಾಪುರ: ಇತ್ತೀಚೆಗೆ ತಾಲೂಕಿನ ಖಾರೇವಾಡ ಗ್ರಾಮದಲ್ಲಿ ಧನಗರ ಗೌಳಿ ಸಮುದಾಯದ ಮಹಿಳೆ ಹೊಲದ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದಳು. ಇಂದು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಖಾರವಾಡ ಗ್ರಾಮಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್ ಅನ್ನು ವಿತರಿಸಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಸಿ.ಜಿ. ನಾಯ್ಕ ಹಾಗೂ ಕಿರವತ್ತಿ ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button