Important
Trending

ಜಿಲ್ಲೆಯಲ್ಲಿಂದು ಕರೊನಾ ಅಬ್ಬರ: ಆರು ಜನರಿಗೆ ಸೋಂಕು?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕರೊನಾ ಇಂದು ಅಬ್ಬರಿಸಿದ್ದು, ಆರು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂಬ ಮಾಹಿತಿ ಬಂದಿದೆ. ಕುಮಟಾ, ಜೋಯಿಡಾ, ದಾಂಡೇಲಿ, ಶಿರಸಿಯಲ್ಲಿ ತಲಾ ಒಂದು ಪ್ರಕರಣ ಮತ್ತು ಹಳಿಯಾಳದಲ್ಲಿ ಇಬ್ಬರಿಗೆ ಕರೊನಾ ದೃಢಪಟ್ಟಿದೆ ಎನ್ನಲಾಗಿದೆ. ಕುಮಟಾದ ನಿನ್ನೆ ಒಂದು ಪ್ರಕರಣ ದಾಖಲಾಗಿದ್ದು, ಇಂದೂ ಕೂಡಾ ಮಹಾರಾಷ್ಟ್ರದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ. ಮಹಾರಾಷ್ಟçದಿಂದ ಕುಮಟಾಕ್ಕೆ ಬಂದ ವ್ಯಕ್ತಿಯನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದ್ದು, ಗಂಟಲುದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಈಗ ಈ ವರದಿ ಪಾಸಿಟಿವ್ ಬಂದಿದ್ದು, ಸೋಂಕು ದೃಢಪಟ್ಟಿದೆ. ಕಾರವಾರದ ಕರೊನಾ ವಾರ್ಡಿಗೆ ರವಾನಿಸಲು ಎಲ್ಲಾ ಸಿದ್ಧತೆ ನಡೆದಿದೆ. ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್‌ನಲ್ಲಿ ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ.

[sliders_pack id=”1487″]

Related Articles

Back to top button