ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾದ ಅಘನಾಶಿನಿ ನದಿಯಲ್ಲಿ ಅಕ್ರಮವಾಗಿ ಚಿಪ್ಪಿ ತೆಗೆಯುವುದನ್ನ ನಿಷೇಧಿಸಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ. ಸಂಬoಧ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಚಿಪ್ಪಿ ತೆಗೆಯುವವರಿಂದ ಸ್ಥಳೀಯ ಮೀನುಗಾರರಿಕೆ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ಅಘನಾಶಿನಿ ನದಿಯಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಗುಂಡಾಗಿರಿ ಮಾಡುತ್ತಿದ್ದಾರೆ.
ಅಲ್ಲದೇ ಈ ಸಂಬoಧ ಜಗಳಗಳು ಉಂಟಾಗಿ ಪರಸ್ಪರ ಪ್ರಕರಣಗಳು ಕೂಡ ದಾಖಲಾಗುತ್ತಿವೆ. ಹೀಗಾಗಿ ಊರಿನಲ್ಲಿ ವಾತಾವರಣ ಹಾಳಾಗಿದೆ. ಚಿಪ್ಪಿ ಗಣಿಗಾರಿಕೆಯಿಂದ ಜೀವ ಹಾನಿಯಾಗುತ್ತಿದೆ. ಆದ್ರಿಂದ ಚಿಪ್ಪಿ ಗಣಿಗಾರಿಕೆಯನ್ನ ಸ್ಥಗಿತಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಹೊಸ್ಕಟ್ಟಾ, ಅಘನಾಶಿನಿ ಸೇರಿದಮತೆ ವಿವಿಧ ಹಳ್ಳಿಗಳಲ್ಲಿ ಕೂಡ ಶಾಂತಿ ನೆಲೆಸುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537