Important
Trending

ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಡಿವೈಡರ್ ಗೆ ಡಿಕ್ಕಿ: ಸ್ಥಳದಲ್ಲೇ ಸಾವು

ಶಿರಸಿ: ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಡಿವೈಡರ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಚಿಪಗಿ ಸರ್ಕಲ್‌ಬಳಿ ನಡೆದಿದೆ. ಡಾ| ಅಂಬೇಡ್ಕರ್ ಭವನದಲ್ಲಿ ಕೆಲಸಮಾಡುತ್ತಿದ್ದ ಎನ್ನಲಾದ ಚಿಪಗಿಯ ಮೋಹನ ಬ್ಯಾತ್ವಾಲ್ (೩೫) ಮೃತಪಟ್ಟ ದುರ್ದೈವಿ.

ಈತ ಶಿರಸಿ ನಗರದಿಂದ ಚಿಪಗಿಯ ತನ್ನ ಮನೆಯ ಕಡೆಗೆ ಹೊರಟಿದ್ದ ವೇಳೆ ಸ್ಕಿಡ್ ಆಗಿ ಬಿದ್ದು ಡಿವೈಡರ್ ಗೆ ವಾಹನ ಬಡಿದಿದೆ. ಈ ಸಂದರ್ಭದಲ್ಲಿ ತಲೆಗೆ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರದೇಶದಲ್ಲಿ ಸ್ವೀಟ್ ಲೈಟ್ ಇಲ್ಲವಾಗಿದೆ. ರಸ್ತೆ ವಿಭಜಿಸಿ ಡಿವೈಡರ್ ಅಳವಡಿಸಿರುವುದು ಇನ್ನಷ್ಟು ತೊಡಕಾಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button