ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ: ಹೆದ್ದಾರಿಯಲ್ಲಿ ಲಾರಿ ಪಲ್ಟಿ

ಹೊನ್ನಾವರ: ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಕೆಳಗಿನೂರು ಸಮೀಪದ ಅಪ್ಸರಕೊಂಡ ತಿರುವಿನಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂ ಆಗಿದೆ. ಲಾರಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಟ್ಕಳ ಮಾರ್ಗದಿಂದ ಹೊನ್ನಾವರ ಕಡೆ ಬರುತ್ತಿದ್ದ ಬಾಳೆಕಾಯಿ ತುಂಬಿದ ವಾಹನ ಹಾಗೂ ಅಪ್ಸರಕೊಂಡ ತಿರುವಿನಿಂದ ಹೆದ್ದಾರಿಗೆ ಏಕಾಏಕಿ ಬಂದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಅಪಘಾತದ ಹಿನ್ನಲೆ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ವ್ಯತಯ ಉಂಟಾಗಿತ್ತು. ಸ್ಥಳಕ್ಕೆ ಮಂಕಿ ಪೋಲಿಸರು ಮತ್ತು ಐ ಆರ್‌.ಬಿ ಸಿಬ್ಬಂದಿ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

ವಿಸ್ಮಯ ನ್ಯೂಸ್ ಹೊನ್ನಾವರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version