Important
Trending

ಕೆಲಸಕ್ಕೆ‌ ಹೋಗಿ ಬರುತ್ತೇನೆಂದು ಹೋದ ಯುವತಿ ನಾಪತ್ತೆ: ಈಕೆಯ ಕುರಿತು ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸಿ

ಭಟ್ಕಳ: ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಮನೆಯಿಂದ ಹೇಳಿ ಹೋದ ಯುವತಿಯಬ್ಬಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ.

ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಾಪತ್ತೆಯಾದ ಯುವತಿ ತಾರಾ ನಾರಾಯಣ ಮರಾಠಿ ಎಂದು ತಿಳಿದುಬಂದಿದೆ.

ತಾರಾ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋಗಿದ್ದಳು. ಆದರೆ ಅಲ್ಲಿಗೂ ಹೋಗದೇ ಈವರೆಗೂ ಮನೆಗೆ ವಾಪಸ್ ಬಾರದೇ,  ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾಳೆ.

ಈ ಬಗ್ಗೆ ಮಂಕಿಯ ಯತ್ನಳ್ಳಿ, ಆಡುಕಾಲಯ ಗ್ರಾಮದ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಗರ ಠಾಣೆಯ ಪೋಲಿಸರು ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button