Follow Us On

WhatsApp Group
Big News

35 ವರ್ಷದ ವ್ಯಕ್ತಿಯ ದಾಖಲೆ ಅಳಿಸಿದ ಆರರ ಪೋರ ! ಕರಾಟೆಯಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಬಾಲಕ

ಕಾರವಾರ: ಕೇವಲ ಒಂದು ನಿಮಿಷದಲ್ಲಿ 305 ಕರಾಟೆ ಪಂಚ್ ಗಳನ್ನು ಮಾಡುವುದರ ಮೂಲಕ ಆರು ವರ್ಷದ ಬಾಲಕ, ಅಂಕೋಲಾ ಮೂಲದ ಸುಶೀಲ್ ಕುಮಾರ್ ಹೆಗಡೆ ವಿಶ್ವ ದಾಖಲೆ ಮಾಡಿದ್ದಾನೆ. ಶೋಟೋಕಾನ್ ಕರಾಟೆಯ ರಾಷ್ಟ್ರಾಧ್ಯಕ್ಷ ವಿನೋದ್ ಕುಮಾರ್, ಎಕ್ಸಲೆಂಟ್ ವರ್ಲ್ಡ್ ರೆಕಾರ್ಡ್ ಮುಖ್ಯ ನಿರ್ಣಾಯಕ ಅವಿನಾಶ ವಿಶ್ವಕರ್ಮ ಅವರು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ವಿಶ್ವ ದಾಖಲೆಯನ್ನು ದೃಢೀಕರಿಸಿದ್ದಾರೆ. ಈ ಹಿಂದೆ 254 ಪಂಚ್ ಮಾಡಿದ್ದ ಗೋವಾದ 35 ವರ್ಷದ ವ್ಯಕ್ತಿಯ ದಾಖಲೆಯನ್ನು ಆರು ವರ್ಷದ ಪೋರ ಸುಶೀಲ್ ಕುಮಾರ್ ಹೆಗಡೆ ಮುರಿದು ಎಲ್ಲರೂ ನಿಬ್ಬೆರಗಾಗುವಂತೆ ಮಾಡಿದ್ದಾರೆ.

ಅಥಣಿಯಲ್ಲಿ ಸುಶೀಲ್ ಕುಮಾರ್ ತಾಯಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಹೀಗಾಗಿ ಸುಶೀಲ್ ಕೂಡ ಅಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಈತನಿಗೆ ಅಥಣಿಯ ಕರಾಟೆ ತರಬೇತುದಾರ ಮೋಹನ ಸಿಂಗ್ ರಜಪೂತ್ ಮಾರ್ಗದರ್ಶನ ನೀಡಿದ್ದರು.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button