ಮಹಿಳೆಯರು, ಯುವತಿಯರ ನಾಪತ್ತೆ ಪ್ರಕರಣ: ಈ ಕುರಿತು ಎಸ್‌ಪಿ ಹೇಳಿದ್ದೇನು ನೋಡಿ?

ಕಾರವಾರ: ಇತ್ತಿಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮಹಿಳೆಯರು, ಯುವತಿಯರ ನಾಪತ್ತೆ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಯುವತಿಯರು ಮತ್ತು ಮಹಿಳೆಯರು ನಾಪತ್ತೆಯಾದ ಪ್ರಕರಣವನ್ನು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತನಿಖೆ ನಡೆಸಲಾವುದು. ಕೆಲವು ಪ್ರಕರಣಗಳು ಪತ್ತೆಯಾಗಿದ್ದು ಮಹಿಳೆಯರು ಹಾಗು ಯವತಿಯರು ಪರಿಚಿತರ ಜೊತೆ ತೆರಳಿದ್ದಾರೆ ಎಂದು ತಿಳಿದುಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಿಳಿಸಿದ್ದಾರೆ. ಅಲ್ಲದೆ, ಕೆಲವರು ಸೋಶಿಯಲ್ ಮೀಡಿಯಾ ಮೂಲಕ ಪರಿಚಯವಾಗಿ ಅಪರಿಚಿತರೊಂದಿಗೆ ತೆರಳಿರುವ ಪ್ರಕರಣಗಳೂ ಬೆಳಕಿಗೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version