ಆಯುರ್ವೇದ ಆಸ್ಪತ್ರೆಯಲ್ಲಿ ಕಾನೂನಿಗೆ ವಿರುದ್ಧವಾಗಿ ಅಲೋಪತಿ ಚಿಕಿತ್ಸೆ: ಆಸ್ಪತ್ರೆ ಮೇಲೆ ಅಧಿಕಾರಿಗಳ ದಾಳಿ

ಅಂಕೋಲಾ: ಇಲ್ಲಿನ ಪಟ್ಟಣದ ಗಂಗಾ ಕ್ಲಿನಿಕ್ ಆಯುರ್ವೇದ ಆಸ್ಪತ್ರೆಯಲ್ಲಿ ಅಲೋಪತಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ ರೋಗಿಗಳಿಗೆ ಸಲೈನ್ ನೀಡುತ್ತಿರುವ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ದಾಳಿ ನಡೆಸಿದ್ದು, ಕ್ರಮ ಕೈಗೊಂಡ ಘಟನೆ ನಡೆದಿದೆ. ಸಾರ್ವಜನಿಕರಿಂದ ಪದೇ ಪದೇ ದೂರುಬಂದ ಹಿನ್ನಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆ ಗಂಗಾ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿ ಡಾ.ನಿತಿನ್ ಹೊಸ್ಮಿಲಕರ ಅವರು ದಾಳಿ ನಡೆಸಿದ್ದರು. ಕಾನೂನಿನ ಪ್ರಕಾರ ಆಯುರ್ವೇದ ಆಸ್ಪತ್ರೆಯಲ್ಲಿ ಅಲೋಪತಿ ಚಿಕಿತ್ಸೆ ನೀಡುವಂತಿಲ್ಲ.

ಈ ಸಂದರ್ಭದಲ್ಲಿ ಕ್ಲಿನಿಕ್‌ನಲ್ಲಿ ಆಯುರ್ವೇದಿಕ್ ವೈದ್ಯ ದುಗ್ಗಾಣಿಯವರು ಆರು ರೋಗಿಗಳಿಗೆ ಅಲೋಪತಿ ಸಲೈನ್ ಹಚ್ಚಿ ಚಿಕಿತ್ಸೆಯನ್ನು ನೀಡುತ್ತಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಅವರ ಆಸ್ಪತ್ರೆಯಲ್ಲಿನ ಎಲ್ಲಾ ಅಲೋಪತಿ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬಳಿಕ ವೈದ್ಯರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಡಿಎಚ್‌ಓ ಹಾಗು ಜಿಲ್ಲಾಧಿಕಾರಿಯವರಿಗೆ ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಮಾಹಿತಿಯನ್ನು ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಸ್ಮಯ ನ್ಯೂಸ್, ವಿಲಾಸ್ ನಾಯಕ ಅಂಕೋಲಾ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version