ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಧಿ ಪ್ರತಿನಿಧಿಗಳೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರತಿನಿಧಿಗಳು ನೆಹರೂರವರ ಕುರಿತು ಮಾತನಾಡಿದರು. ನೆಹರೂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಷಯವನ್ನು ಕೋರಿದರು.

ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗಾಗಿ ವಿವಿಧ ರೀತಿಯ ವೈಯಕ್ತಿಕ ಸ್ಫರ್ಧೆಗಳನ್ನು ಆಯೋಜಿಸಲಾಗತ್ತು. ವಿಜೇತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ಶ್ರೀಮತಿ ವೈಲೆಟ್ ಫರ್ನಾಂಡಿಸ್ ರವರು ನಿರೂಪಿಸಿದರು. ಶ್ರೀಮತಿ ನಯನಾ ನಾಯ್ಕ ಸ್ವಾಗತಿಸಿದರು. ಮತ್ತು ಕುಮಾರಿ ಅಂಜನಾ ಶೆಟ್ಟಿ ವಂದಿಸಿದರು.

Exit mobile version