ಶಿರಸಿ: ಇತ್ತಿಚೆಗೆ ಉತ್ತರಕನ್ನಡದ ಹಲವೆಡೆ ಗಾಂಜಾ ಮಾರಾಟ ಪ್ರಕರಣಗಳು ಹೆಚ್ಚುತ್ತಲೇ ಇರುವುದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ತಾಲೂಕಿನಲ್ಲೂ ಗಾಂಜಾ ಪ್ರಕರಣ ದಿನೇ ದಿನೇ ಬೆಳಕಿಗೆ ಬರುತ್ತಿದ್ದು, ಇದೀಗ ಮನೆಯೊಂದರಲ್ಲಿ ಸಂಗ್ರಹಿಸಿಟ್ಟ 75 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ತಾಲೂಕಿನ ಬಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯ ಕಾರ್ಮಿಕರ ಕ್ಯಾಂಪ್ ಒಂದರ ಮನೆ ಮೇಲೆ ದಾಳಿ ನಡೆಸಿ, ಪೊಲೀಸರು ಗಾಂಜಾ ವಶಪಡಿಸಿಕೊಂಡಿದ್ದಾರೆ.
ಪoಜಾಬ ಮೂಲದ ಜಸ್ವಿಂದರ್ ಸಿಂಗ್ ಮತ್ತು ಅಜಾದಪುರದ ನಿತಿನ್ ಕುಮಾರ್ ಎನ್ನುವ ಇಬ್ಬರನ್ನು ಬಂಧಿಸಲಾಗಿದೆ. ಈ ಇಬ್ಬರು ಆರೋಪಿಗಳು ಗಾಂಜಾ ಮಾರಾಟದ ಉದ್ದೇಶದಿಂದ ಚೀಲದಲ್ಲಿ ಗಾಂಜಾ ಹೂವು ಮತ್ತು ಬೀಜಗಳನ್ನು ಸಂಗ್ರಹಿಸಿಟ್ಟಿದ್ದರು. ಘಟನೆ ಕುರಿತು ಶಿರಸಿ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಶಿರಸಿ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537