ಭಟ್ಕಳ: ಉತ್ತರಕನ್ನಡ ಜಿಲ್ಲೆಯ ಹಲವೆಡೆ ಯುವತಿಯರು ಹಾಗೂ ಮಹಿಳೆಯರ ನಾಪತ್ತೆ ಪ್ರಕರಣ ಹೆಚ್ಚುತ್ತಿದ್ದು, ಕಳೆದ 10 ತಿಂಗಳಲ್ಲಿ ಬರೊಬ್ಬರಿ 232 ನಾಪತ್ತೆ ಪ್ರಕರಣ ದಾಖಲಾಗಿದೆ. ಇದೀಗ ಭಟ್ಕಳದಲ್ಲಿ ಇಂತಹುದೇ ಪ್ರಕರಣ ಬೆಳಕಿಗೆ ಬಂದಿದ್ದು, ಚಿತ್ರಾಪುರದ ಹೊಸಗದ್ದೆ ನಿವಾಸಿ ಮಮತಾ ಜಗದೀಶ ನಾಯ್ಕ ನಾಪತ್ತೆಯಾದ ಮಹಿಳೆ.
ಈ ಕುರಿತು ಉಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ಮಹಿಳೆಗೆ ಕಳೆದ ಕೆಲವು ಸಮಯದ ಹಿಂದೆ ಫೇಸ್‌ಬುಕ್‌ನಲ್ಲಿ ಗೋಕಾಕ ತಾಲೂಕಿನ ಪೋಲಿಸ್ ಓರ್ವನ ಪರಿಚಯವಾಗಿತ್ತು ಎನ್ನಲಾಗಿದೆ. ಆತ ಕಳೆದ ತಿಂಗಳ 25 ರಂದು ಭಟ್ಕಳಕ್ಕೆ ಬಂದು ಈಕೆಯ ವಿಚಾರವಾಗಿ ಗಲಾಟೆ ಮಾಡಕೊಂಡು ಹೋಗಿದ್ದ. ಕುಟುಂಬಸ್ಥರು ಹಾಗೂ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದರು.
ಬಳಕ ತಾನು ಆಕೆಯ ತಂಟೆಗೆ ಬರುವುದಿಲ್ಲ ಎಂದು ಭರವಸೆ ಕೊಟ್ಟು ಹೋಗಿದ್ದು, ಮತ್ತೆ ಪುನ: ನವೆಂಬರ್ 11ಕ್ಕೆ ಬಂದು ಆಕೆಯೊಂದಿಗೆ ಮಾತನಾಡಿದ್ದಾನೆ. ಇದಾದ ಬೆನ್ನಲ್ಲೇ, ಕೇವಲ ಅರ್ಧ ಗಂಟೆಯೊಳಗೆ ಮಹಿಳೆ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ಆಕೆಯ ಸಹೋದರ ರಮೇಶ ನಾರಾಯಣ ನಾಯ್ಕ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ ಹುಡುಕಾಟದಲ್ಲಿ ತೊಡಗಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537