ಕಾರವಾರ: ಆಡಳಿತ ವ್ಯವಸ್ಥೆ ಎಷ್ಟೇ ಬಿಗಿ ಕ್ರಮ ಕೈಗೊಂಡರೂ ಮರಳಿನ ಅಕ್ರಮ ಸಂಗ್ರಹ, ಸಾಗಾಟ ಮುಂದುವರಿದಿದೆ. ಹೌದು, ನಗರದ ವಿವಿಧೆಡೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಮರಳು ದಾಸ್ತಾನು ಪತ್ತೆ ಹಚ್ಚಿದ್ದಾರೆ.
ನಗರಕ್ಕೆ ಹೊಂದಿರುಕೊoಡಿರುವ ಕಾಳಿ ನದಿಯ ದಂಡೆಯ ಮೇಲಿರುವ ಸುಂಕೇರಿ, ಗಾಬಿತವಾಡ, ನಂದನಗದ್ದಾ ಮತ್ತು ನದಿವಾಡದ ವಿವಿಧೆಡೆ ದಾಳಿ ನಡೆಸಿದ ಉಪವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಅಕ್ರಮ ಮರಳು ಸಂಗ್ರಹವನ್ನು ಪತ್ತೆ ಮಾಡಿದೆ. ಈ ದಾಳಿಯಲ್ಲಿ ಸುಮಾರು 45 ಟನ್ ಗಳಷ್ಟು ಮರಳನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಅಲ್ಲದೆ, ಉಪವಿಭಾಗಾಧಿಕಾರಿಗಳು ಕಾಳಿ ನದಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬೋಟ್ ಮೂಲಕ ತೆರಳಿ ಅಕ್ರಮವಾಗಿ ಮರಳು ತೆಗೆಯುತ್ತಿರುವ ಬಗ್ಗೆ ಕೂಡಾ ಪರಿಶೀಲನೆ ನಡೆಸಿದರು.
ವಿಸ್ಮಯ ನ್ಯೂಸ್, ಕಾರವಾರ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537