ಶಿರಸಿ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ರೈತರೊಬ್ಬರು ಮೃತಪಟ್ಟ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನರೂರು ಗ್ರಾಮದ ಗಂಗಾಧರ ಶೇಷಣ್ಣನವರ (58) ಮೃತ ರೈತ. ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯುಂಟಾಗಿದ್ದಕ್ಕೆ ಬೇಸರಗೊಂಡು ನವೆಂಬರ್ 17ರಂದು ಕೀಟನಾಶಕ ಸೇವಿಸಿದ್ದರು.
ಅವರನ್ನು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಗಂಗಾಧರ ಮೃತಪಟ್ಟಿದ್ದಾರೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಲಮಾಡಿ ಹೊಲದಲ್ಲಿ ಶುಂಠಿ ಮತ್ತು ಭತ್ತ ಬೆಳೆದಿದ್ದ ಎನ್ನಲಾಗಿದೆ. ಉತ್ತಮ ಫಸಲು ಕೂಡಾ ಬಂದಿತ್ತು. ಆದರೆ, ಅಕಾಲಿಕ ಮಳೆಯಿಂದ ಎಲ್ಲವೂ ನಾಶವಾಗಿದ್ದು, ನೋಮದ ರೈತ ಸಾವಿಗೆ ಶರಣಾಗಿದ್ದಾನೆ.
ವಿಸ್ಮಯ ನ್ಯೂಸ್, ಕಾರವಾರ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537