Follow Us On

WhatsApp Group
Focus News
Trending

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಕೃಷ್ಣಾ ಹರಿಜನ ನೇಮಕ

ಹೊನ್ನಾವರ : ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಬಸವರಾಜ ದೊಡ್ಮನಿಯವರ ಸೂಚನೆಯ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಎಫ್. ಹೆಚ್. ಜಕ್ಕಪ್ಪನವರ್ ಅವರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರನ್ನಾಗಿ ಹೊನ್ನಾವರ ಪಟ್ಟಣದ ಪ್ರಭಾತನಗರ ನಿವಾಸಿ ಕೃಷ್ಣಾ ಹರಿಜನ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಮತ್ತು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸಂಚಾಲಕರನ್ನಾಗಿ ಬಾಸ್ಕೇರಿಯ ಈಶ್ವರ ಬೀರಾ ಮುಕ್ರಿ ಹಾಗೂ ಜಿಲ್ಲಾ ಸಮಿತಿಯ ಸದಸ್ಯರನ್ನಾಗಿ ಹೊನ್ನಾವರ ಬ್ಲಾಕ್ ಪರಿಶಿಷ್ಟ ಜಾತಿ ವಿಭಾಗದ ಮಾಜಿ ಅಧ್ಯಕ್ಷ ಸೋಮಯ್ಯ ಜಟ್ಟಿ ಮುಕ್ರಿ ಇವರನ್ನು ನೇಮಿಸಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರ ಮಾರ್ಗದರ್ಶನದಲ್ಲಿ, ಕಾಂಗ್ರೇಸ್ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಜಾರಿಗೆ ತಂದು, ಕಾಂಗ್ರೇಸ್ ಶಿಷ್ಟಾಚಾರ ಮತ್ತು ಶಿಸ್ತು ಪಾಲಿಸಲು ರಾಜ್ಯಾಧ್ಯಕ್ಷರ ಆದೇಶ ಪತ್ರದಲ್ಲಿ ಸೂಚಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.

Back to top button