Follow Us On

WhatsApp Group
Important
Trending

ವಿವಿಧೆಡೆ ದಾಳಿ: ಗಾಂಜಾ ಸೇವನೆ ಮಾಡಿದ 15 ಯುವಕರು ವಶಕ್ಕೆ

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಗಾಂಜಾ ಘಾಟು ಹೆಚ್ಚುತ್ತಿದ್ದು, ಹೀಗಾಗಿ ಪೊಲೀಸರು ಬಿಸಿಮುಟ್ಟಿಸುತ್ತಿದ್ದಾರೆ. ಇದೀಗ ಗಾಂಜಾ ಮಾರಾಟ ಮತ್ತು ಸೇವನೆ ಆರೋಪದಲ್ಲಿ ಶಿರಸಿಯ ವಿವಿಧೆಡೆ ದಾಳಿ ನಡೆಸಿದ ಪೊಲೀಸರು 15 ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಒಟ್ಟು 15 ಯುವಕರನ್ನು ವಶಕ್ಕೆ ಪಡೆಯಲಾಗಿದೆ. ನಗರದ ನೆಹರು ನಗರ, ಕಸ್ತೂರಬಾ ನಗರ, ಸೇರಿದಂತೆ ಹಲವಡೆ ಪೊಲೀಸರು ದಾಳಿ ನಡೆಸಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಾಗಿ ವೈದ್ಯಕೀಯ ಪರೀಕ್ಷೆಗೆ ಯುವಕರನ್ನು ಉಡುಪಿಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಈ ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಗಾಂಜಾಸೇವನೆ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಬಿಸಿ ಮುಟ್ಟಿಸಿದ್ದಾರೆ.

ವಿಸ್ಮಯ ನ್ಯೂಸ್ ಶಿರಸಿ

Back to top button