ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ಅಂತಿಮ: ಭೀಮಣ್ಣ ನಾಯ್ಕಗೆ ಟಿಕೆಟ್

ಶಿರಸಿ: ಕೊನೆಗೂ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ಅಂತಿಮಗೊಂಡಿದೆ. ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಹೆಸರು ಅಂತಿಮಗೊಂಡಿದೆ. ಹೌದು, ಇಂದು ಕಾಂಗ್ರೆಸ್ ನಿಂದ ಪರಿಷತ್ ಚುನಾವಣೆಯ ಅಭ್ಯರ್ಥಿ ಹೆಸರನ್ನು ಪ್ರಕಟ ಮಾಡಲಾಗಿದ್ದು, ಉತ್ತರ ಕನ್ನಡದಿಂದ ಭೀಮಣ್ಣ ನಾಯ್ಕರನ್ನು ಕಣಕ್ಕಿಳಿಸಿದೆ.

ಭೀಮಣ್ಣ ನಾಯ್ಕ ಅವರ ಬದಲಿಗೆ ಸಾಯಿ ಗಾಂವ್ಕರ್ ಅವರಿಗೆ ಟಿಕೇಟ್ ಎನ್ನುವ ಸುದ್ದಿ ಹರಡಿತ್ತು. ಆದರೆ ಅಂತಿಮವಾಗಿ ಕಾಂಗ್ರೆಸ್ ಭೀಮಣ್ಣ ನಾಯ್ಕರವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.

ವಿಸ್ಮಯ ನ್ಯೂಸ್ ಶಿರಸಿ

Exit mobile version