ಪ್ರವಾಸಿತಾಣ ಮುರುಡೇಶ್ವರ ಶಿವನಮೂರ್ತಿಯ ಮೇಲೆ ಬಿತ್ತಾ ‘ಐಸಿಸ್ ಕಣ್ಣು! ಮೂರ್ತಿ ವಿರೂಪಗೊಳಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಶಾಸಕ ಸುನೀಲ ನಾಯ್ಕರಿಂದ ದೇವಸ್ಥಾನದ ಭದ್ರತೆಗೆ ಗ್ರಹ ಸಚಿವರಿಗೆ ದೂರವಾಣಿಕರೆ

ಭಟ್ಕಳ: ಮುರುಡೇಶ್ವರದ ಬೃಹತ್ ಶಿವನ ಮೂರ್ತಿಯ ಮೇಲೆ ಐಸಿಸ್ ಉಗ್ರರ ಕಣ್ಣು ಬಿದ್ದಿದೆ ಎಂಬ ಭಯಾನಕ ಅಂಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಕುರಿತು ಟ್ವಿಟರ್ ಮತ್ತು ಫೇಸ್ಬುಕ್ ಪೋಸ್ಟ್ ಹಾಕಿರುವ ಅಂಶುಲ್ ಸಕ್ಸೇನಾ ಎಂಬ ಯುವಕ, ಐಸಿಸ್ ಮುಖವಾಣಿ ಪತ್ರಿಕೆ ‘the VOICE OF HIND’ನಲ್ಲಿ ಮುರುಡೇಶ್ವರದ ಶಿವನ ಪ್ರತಿಮೆಯ ಪೋಟೋ ಹಾಕಿದ್ದು, ಅದರ ಮೇಲೆ ‘Its time to Break False Gods’ ಎಂ ಬರಹವನ್ನು ಹಾಕಲಾಗಿದೆ.

ಜೊತೆಗೆ ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ, ಅದರ ತುತ್ತ ತುದಿಗೆ ಐಸಿಸ್ ರೀತಿಯ ಧ್ವಜ ಹಾರಾಡುವಂತೆ ಚಿತ್ರಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಈ ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅವರು ಫೇಸ್ ಬುಕ್ ಹಾಗೂ ಟ್ಟಿಟರ್ ನಲ್ಲಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸ್ಥಳೀಯ ಶಾಸಕ ಸುನೀಲ ತಮ್ಮ ಫೇಸ್ಬುಕ್ ಖಾತೆಯಲ್ಲಿ ಆಕ್ರೋಶ ಹೊರಹಾಕಿದ್ದು ಹಿಂದೂ ದೇವಾಲಯಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ತಮ್ಮ ಪಕ್ಷದ ತತ್ವ ಮತ್ತು ಸಿದ್ಧಾಂತಗಳಲೊಂದಾಗಿದ್ದು
ಉಗ್ರ ಸಂಘಟನೆಯ ಹೆಡೆಮುರಿಕಟ್ಟಲು ನಮ್ಮ ರಕ್ಷಣಾ ಇಲಾಖೆಯು ಸದೃಢ ಮತ್ತು ಸಶಕ್ತವಾಗಿದೆ.

ಇಂತಹ ಪೊಳ್ಳು ಬೆದರಿಕೆಗೆ ಹೆದರುವ ಆಡಳಿತ ವ್ಯವಸ್ಥೆ ಈಗಿಲ್ಲ. ಈ ಸಂಬಂಧ ಈಗಾಗಲೇ ಗೃಹ ಮಂತ್ರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ನೀಡಲಾಗಿದ್ದು, ಶೀಘ್ರವೇ ಭೇಟಿಯಾಗಿ ಮುರ್ಡೇಶ್ವರ ದೇವಸ್ಥಾನದ ಸುತ್ತ ಮುತ್ತ ಹೆಚ್ಚಿನ ಭದ್ರತೆ ವದಗಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

Exit mobile version