Follow Us On

WhatsApp Group
Important
Trending

ಶಿರಸಿಯ 12 ಯುವಕರ ಗಾಂಜಾ ಸೇವನೆ ವೈದ್ಯಕೀಯ ಪರೀಕ್ಷೆಯಲ್ಲಿ ದೃಢ:

ಕಾರವಾರ: ಎರಡು ದಿನಗಳ ಹಿಂದೆ ಶಿರಸಿಯಲ್ಲಿ ಕಾರ್ಯಾಚರಣೆ ನಡೆಸಿ, ಗಾಂಜಾ ಸೇವನೆ ಹಾಗೂ ಮಾರಾಟ ಆರೋಪದಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದ 15 ಯುವಕರ ಪೈಕಿ 12 ಮಂದಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ.22ರಂದು ಮಾದಕ ದ್ರವ್ಯ ಮಾರಾಟ ಮತ್ತು ಸೇವನೆ ತಡೆಯುವ ಉದ್ದೇಶದಿಂದ ಗಾಂಜಾ ಪೆಡ್ಲರ್‌ಗಳು ಹಾಗೂ ಮಾದಕ ವ್ಯಸನಿಗಳ ವಿರುದ್ಧ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ, ಕಸ್ತೂರಬಾನಗರ, ನೆಹರೂನಗರ, ಇಂದಿರಾನಗರ, ಮರಾಠಿಕೊಪ್ಪ, ಕೆಎಚ್‌ಬಿ ಕಾಲೋನಿ, ಕೋಟೆಕೆರೆ ಸ್ಥಳಗಳಲ್ಲಿ 15 ಯುವಕರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಪ್ರಕ್ರಿಯೆಯ ಬಗ್ಗೆ ವೈದ್ಯಕೀಯ ಪರೀಕ್ಷೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಗಿತ್ತು.

ಇವರ ಪರೀಕ್ಷಾ ವರದಿ ಇಂದು ಪೊಲೀಸರ ಕೈ ಸೇರಿದ್ದು, ಕೆಎಚ್‌ಬಿ ಕಾಲೋನಿಯ ನಿವಾಸಿ ಅಬೀದ ರಫೀಕ (19), ಅಯ್ಯಪ ನಗರದ ರೋಷನ್ ಪಾಲೇಕರ (19), ದೀಪಕ ಕೇರಳಕರ (21), ವಿವೇಕಾನಂದ ನಗರದ ಪ್ರಥ್ವಿ ನಾರ್ವೇಕರ (26), ಗಣೇಶ ನಗರ 1ನೇ ಕ್ರಾಸ್‌ನ ಪ್ರಸನ್ನ ಕುರಬರ (42), ಕಸ್ತೂರಬಾನಗರದ ಮೊಹಮ್ಮದ್ ಮೊಸೀನ (23), ಮೊಹಮ್ಮದ್ ಯಾಸೀನ (25), ಪೈಜಲ್ ಖಾನ್ (26), ಕೋಟೆಕೆರೆ ಸಮೀರ ಅಹ್ಮದ್ (23), ಇಂದಿರಾ ನಗರದ ಮುಸ್ತಾಕ ಅಬ್ದುಲ್ ರೆಹಮಾನ್ (24), ಮನ್ಸೂರು ಅಬ್ದುಲ್ ಕರೀಂ (24), ನೆಹರೂ ನಗರದ ಶಿವಮೂರ್ತಿ ನಾಯ್ಕ (20) ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಇವರ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ 1985ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ. ಈ ವಿಶೇಷ ಕಾರ್ಯಾಚರಣೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬದರಿನಾಥ, ಡಿವೈಎಸ್‌ಪಿ ರವಿ ಡಿ.ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ಶಿರಸಿ ಹೊಸಮಾರುಕಟ್ಟೆ ಪಿಎಸ್‌ಐ ಭೀಮಾಶಂಕರ ಸಿನ್ನೂರ ಹಾಗೂ ಸಿಬ್ಬಂದಿಯವರ ನೇತ್ರತ್ವದಲ್ಲಿ ಪ್ರಥಮ ಬಾರಿಗೆ ಶಿರಸಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು.

ಸದರಿ ಕಾರ್ಯಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿ, ಸಿಬ್ಬಂದಿಯವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಡಿ.ಪೆನ್ನೇಕರ್ ಪ್ರಶಂಸಿಸಿದ್ದಾರೆ. ಮಾದಕದ್ರವ್ಯ ಮಾರಾಟ ಮತ್ತು ಸೇವನೆಯಿಂದ ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶದಿಂದ ಈ ತರಹದ ವಿಶೇಷ ಕಾರ್ಯಾಚರಣೆಯನ್ನು ಜಿಲ್ಲೆಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಲಾಗುವುದು ಎಂದೂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್ ಶಿರಸಿ


ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button