ಮಾಸೂರ್ :”ಫ್ಯಾಮಿಲಿ ಪ್ಲಾನಿಂಗ್ ಅಸೋಶಿಯೆಷನ್ ಆಪ್ ಇಂಡಿಯಾ”, ಉತ್ತರಕನ್ನಡ ಶಾಖೆ ಕುಮಟಾ, ವತಿಯಿಂದ ವತಿಯಿಂದ ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಧರ್ಮಸ್ಥಳ ಸಂಸ್ಥೆ ಮಾಸೂರ್ ಕ್ರಾಸ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ವನ್ನು ಇತ್ತೀಚೆಗೆ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.. ಭಾರತೀಯ ಕುಟುಂಬ ಯೋಜನಾ ಸಂಘದ ವೈದ್ಯಾಧಿಕಾರಿ ಡಾ// ಶ್ರೇಯಾ ಶೇಟ್‌ರವರು ಸುಮಾರು 50 ಕ್ಕೂ ಹೆಚ್ಚಿನ ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಧರ್ಮಸ್ಥಳ ಸಂಘದ ಜನರಿಗೆ ಆರೋಗ್ಯ ತಪಾಸಣೆ ನಡೆಸಿದರು.
ಭಾರತೀಯ ಕುಟುಂಬ ಯೋಜನಾ ಸಂಘದ ಕಾರ್ಯಕ್ರಮಾಧಿಕಾರಿ ಮಿಸ್ ಮಂಜುಳಾ ಗೌಡರವರು ಫ್ಯಾಮಿಲಿ ಪ್ಲಾನಿಂಗ್ ಅಸೋಶಿಯೆಷನ್ ಆಪ್ ಇಂಡಿಯಾದ ಸೇವೆಗಳ ಕುರಿತು ಮಾಹಿತಿ ನೀಡಿದರು. ಭಾರತೀಯ ಕುಟುಂಬ ಯೋಜನಾ ಸಂಘದ ಸ್ಟಾಪ್ ನರ್ಸ ಆದ ಶರ್ಲಿ ಪೀಟರ್‌ರವರು, ಫ್ಯಾಮಿಲಿ ಪ್ಲಾನಿಂಗ್ ವಿಧಾನಗಳ ಕುರಿತು ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಧರ್ಮಸ್ಥಳ ಸಂಸ್ಥೆಯ ಸಮನ್ವಯಾಧಿಕಾರಿ ಶ್ರೀಮತಿ ಆಶಾರವರು ಸ್ವಾದತಿಸಿ,ಸಂಸ್ಥೆಯನ್ನ ಉದ್ದೇಶಿಸಿ ಮಾತನಾಡಿದರು. ಸಿಸ್ಟರ ಆದ ಕಮಲಾ ಪಟಗಾರ ಹಾಗೂ ಶರ್ಲಿ ಪೀಟರ್ ಸಹಕರಿಸಿದರು.