Important
Trending

ಪೊಲೀಸರ ಕಾರ್ಯಾಚರಣೆ: ಬೈಕ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ

ಕಾರವಾರ: ಬೈಕ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಕಳೆದ ಒಂದು ತಿಂಗಳ ಹಿಂದೆ ಬೈಕ್ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಕಾರವಾರ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಬೈಕ್ ವಶಪಡಿಸಿಕೊಂಡಿದ್ದಾರೆ. ಕಾರವಾರ ನಗರದ ಶಿರವಾಡದ ಬಂಗಾರಪ್ಪ ನಗರದ ಆನಂದ ಛಲವಾಧಿ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಈತ ಚೆಂಡಿಯಾದ ಸಿದ್ದೇಶ ನಾಯ್ಕ ಎಂಬುವವರ ಬೈಕ್ ಕಳ್ಳತನ ಮಾಡಿದ್ದು, ಈ ಬಗ್ಗೆ ಇಲ್ಲಿನ ಗ್ರಾಮೀಣ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ವೇಳೆ, ಆರೋಪಿ ವಿರುದ್ಧ ಕಾರವಾರದ ಚಿತ್ತಾಕುಲ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿಯೂ ಕಳ್ಳತನ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button