Important
Trending

ಬೈಕ್ ಗೆ ಡಿಕ್ಕಿಹೊಡೆದ ಲಾರಿ: ಬೈಕ್ ಸವಾರನಿಗೆ ಗಂಭೀರ ಗಾಯ

ಹೊನ್ನಾವರ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ತಾಲೂಕಿನ ಕರ್ಕಿಯ ಹಿರಿಯ ಪ್ರಾಥಮಿಕ ಶಾಲೆಯ ಬಳಿ ನಡೆದಿದೆ. ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷತನದಿಂದ ಲಾರಿ ಚಲಾಯಿಸಿಕೊಂಡು ಬಂದು ಚಾಲಕ ಹಳದೀಪುರದಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ.

ಅಪಘಾತದಲ್ಲಿ ಕರ್ಕಿ ಹೆಗಡೆಹಿತ್ಲದ ನಿವಾಸಿ ಭರತ್ ವಿಶ್ವನಾಥ ನಾಯ್ಕ(27) ಈತನಿಗೆ ಗಂಭೀರ ಗಾಯವಾಗಿದೆ. ಈತನ ತಲೆ, ಹಾಗೂ ಕೈ ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೊರ ಜಿಲ್ಲೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೆ ಬಿಟ್ಟು ಲಾರಿ ಚಾಲಕ ಪರಾರಿಯಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button