Important
Trending

ಸಾಲಬಾಧೆ ತಾಳಲಾರದೆ ರಿಯಲ್ ಎಸ್ಟೇಟ್ ಉದ್ಯಮಿ ಸಾವಿಗೆ ಶರಣು


ಶಿರಸಿ: ಕೋವಿಡ್ ಸಂಕಷ್ಟ, ಲಾಕ್ ಡೌನ್ ಬಳಿಕ ಉತ್ತರಕನ್ನಡದಲ್ಲೂ ಆತ್ಮಹತ್ಯೆ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿದೆ. ಮೊನ್ನೆ ಮೊನ್ನೆಯಷ್ಟೆ ಶಿಕ್ಷಕಿ ಸಾವಿಗೆ ಶರಣಾದ ಬೆನ್ನಲ್ಲೆ, ಇದೀಗ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ದೊಡ್ಡಳ್ಳಿ ಮೂಲದ ಹಾಲಿ ಹನುಮಗಿರಿಯಲ್ಲಿ ವಾಸವಿದ್ದ ಸೀತಾರಾಮ ಜೋಗಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ. ಸಾಲಬಾದೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

ಮೃತ ವ್ಯಕ್ತಿ ಕಳೆದ ಹಲವು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದು, ವ್ಯವಹಾರದ ಸಲುವಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದ. ಇದೀಗ ಸಾಲ ತೀರಿಸಲು ಆಗಿಲ್ಲವೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಇಲ್ಲಿನ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button