ಬೈಕ್ ಮತ್ತು ಕಾರಿನ ಮಧ್ಯೆ ಡಿಕ್ಕಿ : ಬೈಕ್ ಸವಾರನಿಗೆ ಗಂಭೀರ ಗಾಯ

ಭಟ್ಕಳ: ಬೈಕ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ರಂಗಿನಕಟ್ಟೆಯ ಬಳಿ ರಾಷ್ಟಿçÃಯ ಹೆದ್ದಾರಿ-66ರಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ತಿಮಪ್ಪ ಮೊಗೇರ್ ಎಂದು ಗುರುತಿಸ ಲಾಗಿದೆ. ಬೈಕ್ ಸವಾರ ಶಿರಾಲಿ ಕಡೆಯಿಂದ ಭಟ್ಕಳದ ಕಡೆಗೆ ಮತ್ತು ಕಾರು ಮುರುಡೇಶ್ವರ ಕಡೆಗೆ ಹೋಗುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ನಡೆದ ಬಳಿ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ತಿಮಪ್ಪ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಘಟನೆಯಿಂದ ರಾಷ್ಟಿçÃಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.

ವಿಸ್ಮಯ ನ್ಯೂಸ್,ಭಟ್ಕಳ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 988044653

Exit mobile version