Follow Us On

WhatsApp Group
Important
Trending

ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು: ಕಾಡುತ್ತಿದೆ ಹಲವು ಅನುಮಾನ

ಶಿರಸಿ: ಕ್ಲಕ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ವ್ಯಕ್ತಿಯೊಬ್ಬರು ಸಾಗರ-ತಾಳಗುಪ್ಪ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಗರದ ಶಿರವಾಳ ರೈಲ್ವೆ ಗೇಟ್ ನಡುವೆ ನಡೆದಿದೆ. ಶಿರಸಿ ತಾಲೂಕಿನ ಹುಲೇಕಲ್ ನ ನಾಗರಾಜ್ ಹೆಗಡೆ(31) ಎಂಬುವರೆ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಇವರು ಸಾಗರದ ಜೆ.ಎಂ.ಎಫ್ ಸಿ ಯಲ್ಲಿ ಬೆಂಚ್ ಕ್ಲರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಆದರೆ, ಇದು ಆತ್ಮಹತ್ಯೆಯೋ, ಆಕಸ್ಮಿಕ ದುರಂತವೋ ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆ ನಂತರ ತಿಳಿದುಬರಬೇಕಿದೆ. ರೈಲಿಗೆ ಸಿಲುಕಿ ದೇಹ ಚಿದ್ರ ಚಿದ್ರಗೊಂಡಿದ್ದು , ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 988044653

Back to top button