Follow Us On

WhatsApp Group
Important
Trending

ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಶಿರಸಿಯ ಪ್ರೊಫೆಸರ್ ನಿರಂಜನ ವಾನಳ್ಳಿ ನೇಮಕ:ರಾಜಭವನದಿಂದ ಅಧಿಸೂಚನೆ

ಶಿರಸಿ: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಪ್ರೊಫೆಸರ್ ನಿರಂಜನ ವಾನಳ್ಳಿ ನೇಮಕಗೊಂಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ನಿರಂಜನ ವಾನಳ್ಳಿ ಅವರನ್ನು ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ, ರಾಜಭವನದಿಂದ ಅಧಿಸೂಚನೆ ಹೊರಡಿಸಲಾಗಿದೆ.

ಅಧಿಕಾರ ವಹಿಸಿಕೊಂಡ ದಿನದಿಂದ 4 ವರ್ಷಗಳ ಅವಧಿಗೆ ವಾನಳ್ಳಿ ಅವರು ಕುಲಪತಿಯಾಗಿ ಇರಲಿದ್ದಾರೆ. ಇವರು ಮೂಲತಃ ಉತ್ತರಕನ್ನಡ ಜಿಲ್ಲೆ ಶಿರಸಿ ತಾಲೂಕಿನ ವಾನಳ್ಳಿಯವರು.

ಕುಲಪತಿ ಶೋಧನಾ ಸಮಿತಿ ಶಿಫಾರಸ್ಸಿನ ಆಧಾರದ ಮೇರೆಗೆ ಪ್ರಾಧ್ಯಾಪಕ ಪ್ರೊಫೆಸರ್ ನಿರಂಜನ ವಾನಳ್ಳಿ ಅವರನ್ನು ನೂತನ ಕುಲಪತಿಯಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ವಿಸ್ಮಯ ನ್ಯೂಶ್ ಶಿರಸಿ

Back to top button