Follow Us On

WhatsApp Group
Important
Trending

ಅಕ್ಕನ ಮನೆಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು: ಬೈಕ್ ಸವಾರನಿಗೆ ಗಂಭೀರ ಗಾಯ

ಭಟ್ಕಳ : ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗೊರಟೆ ಕ್ರಾಸ್ ಸಮೀಪ ನಡೆದಿದೆ. ಗಾಯಗೊಂಡ ಬೈಕ್ ಸವಾರ ಯೋಗೇಶ ನಾಯ್ಕ ಎಂದು ತಿಳಿದು ಬಂದಿದೆ. ಈತ ಭಟ್ಕಳದಿಂದ ಗೊರಟೆಯಲ್ಲಿರುವ ತನ್ನ ಅಕ್ಕನ ಮನೆಗೆ ತೆರಳುತ್ತಿರುವ ವೇಳೆ ಕುಂದಾಪುರದಿoದ ಕಾರವಾರ ಕಡೆಗೆ ತೆರಳುತ್ತಿದ್ದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಬೈಕ್ ಸವಾರ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಾಳುವನ್ನು ಪ್ರಥಮ ಚಿಕಿತ್ಸೆಗೆ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು , ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button