ಯಲ್ಲಾಪುರ: ಉತ್ತರಕನ್ನಡದ ಜನರಿಗೆ ಅಕಾಲಿಕ ಮಳೆ ಕಂಟಕವಾಗಿ ಪರಿಣಮಿಸಿದೆ. ಅಕಾಲಿಕವಾಗಿ ಸುರಿವ ಮಳೆ ಹಾಗೂ ಬೀಸುವ ಗಾಳಿಗಳಿಂದ ಜನತೆ ತೊಂದರೆಗೆ ಸಿಲುಕಿದ್ದಾರೆ. ತಾಲೂಕಿನ ಉಮ್ಮಚ್ಗಿಯಲ್ಲಿ ಸುರಿದ ಭಾರೀ ಮಳೆಗೆ ಮನೆಯೊಂದು ಕುಸಿದ ಘಟನೆ ನಡೆದಿದೆ. ಮನೆ ಕುಸಿತಕ್ಕೊಳಗಾದ ಸಂದರ್ಭದಲ್ಲಿ ಮನೆಯವರೆಲ್ಲ ಹೊರಗಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕುಸಿದ ಮನೆ ಉಮ್ಮಚ್ಗಿ ಕಾಲನಿಯ ನಾಣು ಮಂಜಾ ದೇವಡಿಗ ಎನ್ನುವವರಿಗೆ ಸೇರಿದ್ದು, ಮುಂಜಾಗ್ರತೆಯಾಗಿ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಬೇರೆಡೆ ಸಾಗಿಸಲಾಗಿದೆ.ಮನೆ ಬಿದ್ದ ಸುದ್ದಿ ತಿಳಿದ ತಕ್ಷಣ ಉಮ್ಮಚ್ಗಿ ಗ್ರಾ.ಪಂ.ಸ್ಥಳೀಯ ಸದಸ್ಯರು ಅಧಿಕಾರಿಗಳು ಆಗಮಿಸಿ, ಪಂಚನಾಮೆ ನಡೆಸಿ, ಪರಿಹಾರದ ಭರವಸೆ ನೀಡಿದರು.
ವಿಸ್ಮಯ ನ್ಯೂಸ್, ಯಲ್ಲಾಪುರ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091