ರಾಜ್ಯ ಮಟ್ಟದ ಲೇಖನ ಸ್ಪರ್ಧೆ: ಕಾಳಿಕಾ ಭವಾನಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ಯಶಸ್ವಿನಿಗೆ ಪ್ರಥಮ ಸ್ಥಾನ
ಶಿರಸಿ: ಅಕ್ಷರ ಬ್ರಹ್ಮ ರವಿ ಬೆಳಗೆರೆಯವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ವಾಗ್ನಿಗಳ ಬಳಗದ ವತಿಯಿಂದ ರವಿ ಬೆಳಗೆರೆಯವರ ಬದುಕು, ಬರಹಗಳ ಕುರಿತು ರಾಜ್ಯಮಟ್ಟದ ಲೇಖನ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಕಾನಸೂರಿನ ಶ್ರೀ ಕಾಳಿಕಾ ಭವಾನಿ ಪ್ರೌಢಶಾಲೆಯ ಗಣಿತ ಶಿಕ್ಷಕರಾದ ಯಶಸ್ವಿನಿ ಶ್ರೀಧರ ಮೂರ್ತಿಯವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.
ಪ್ರಾರ್ಥನಾ ಶಾಲೆಯ ಅಧ್ಯಾಪಕಿಯವರಾದ ಎ. ಆರ್.ವಾಣಿಯವರು ತೀರ್ಪುಗಾರರಾಗಿದ್ದರು. ವಿಶೇಷ ಸಮಾರಂಭದಲ್ಲಿ ಬಹುಮಾನವನ್ನು ಪ್ರದಾನ ಮಾಡಲಾಗುವುದು ಎಂದು ಪ್ರಧಾನ ಆಯೋಜಕರಾದ ದೀಕ್ಷಿತ್ ನಾಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091