ಮತ್ತೆ ಗಾಂಜಾ ಸಮೇತ ಸಿಕ್ಕಿಬಿದ್ದ ವ್ಯಕ್ತಿ: ಪ್ರಸಿದ್ಧ ಪ್ರವಾಸಿ ಕ್ಷೇತ್ರಕ್ಕೆ ತೆರಳುವ ರಸ್ತೆಯೇ ಈತನ ಅಡ್ಡೆ
ಹೊನ್ನಾವರ :ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಎನ್ ಡಿ ಪಿ ಎಸ್ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.
ತಾಲೂಕಿನ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಇಡಗುಂಜಿ ಕ್ರಾಸ್ ಸಮೀಪ ಇರುವ ವಿನಾಯಕ ವನದ ಪಕ್ಕದ ಕಚ್ಚಾ ರಸ್ತೆಯಲ್ಲಿ ಗುಣವಂತೆಯ ಜಗದೀಶ ಶಂಭು ಗೌಡ ತನ್ನ ದ್ವಿಚಕ್ರ ವಾಹನದಲ್ಲಿ ಭಟ್ಕಳದ ರಿಜ್ವಾನ್ ಎಂಬುವವರಿಂದ ಖರೀದಿಸಿದ ಸುಮಾರು 6000/- ರೂಪಾಯಿ ಮೌಲ್ಯದ 60 ಗ್ರಾಮ ಗಾಂಜಾವನ್ನು ಸ್ಕೂಟಿಯ ಬಾಕ್ಸನಲ್ಲಿಟ್ಟು ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.
ಮಂಕಿ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲವು ವರ್ಷದಿಂದ ತಾಲೂಕಿನ ಗಾಂಜಾ ವಿದ್ಯಾರ್ಥಿಗಳ ಕೈ ಸೇರುತ್ತಿದೆ ಎನ್ನುವ ಅಪವಾದ ಕೇಳುತ್ತಿದ್ದರೂ ಆಗೊಮ್ಮೆ ಈಗಮ್ಮೊ ಇಂತಹ ಬೇಳಕಿಗೆ ಬರುತ್ತಿದೆ.
ಕೆಲ ತಿಂಗಳ ಹಿಂದೆ ಈತನು ಮಾಳಕೋಡ ರಸ್ತೆಯ ಬೋಳಕಟ್ಟೆಯಲ್ಲಿ ಗಾಂಜಾ ಮಾರಾಟ ತೊಡಗಿದ್ದಾಗ ಇದೇ ಆರೋಪೊ ಸಿಕ್ಕಿ ಬಿದ್ದಿದ್ದ . ಆದರು ತನ್ನ ಹಳೇ ಚಾಳಿಯನ್ನು ಮತ್ತೆ ಮುಂದುವರಿಸಿದ್ದಾ ಇದೀಗ ಮತ್ತೆ ಮಾಲು ಸಮೇತ ಸಿಕ್ಕಿ ಬಿದ್ದಿದ್ದು ಪೋಲಿಸರ ಅತಿಥಿಯಾಗಿದ್ದಾನೆ.
ಈ ಪ್ರಕರಣದಿಂದಾಗಿ ಹೊನ್ನಾವರ ತಾಲೂಕಿನಲ್ಲಿ ಗಾಂಜಾ ವ್ಯವಹಾರ ಜೋರಾಗಿ ನಡೆಯುತ್ತಿದೆಯಾ ಎನ್ನುವ ಅನುಮಾನ ಉಂಟಾಗಿದೆ. ಈತನ ಜೊತೆ ಈ ಪ್ರಕರಣದ ಇರುವರೆಲ್ಲರನ್ನು ಪೊಲೀಸರು ಪತ್ತೆ ಮಾಡಬೇಕಿದೆ ಎಂಬ ಆಗ್ರಹ ಕೇಳಿಬಂದಿದೆ.
ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091