Important
Trending

ಸಿದ್ದಾಪುರ ತಾಲೂಕು ಆಸ್ಪತ್ರೆಯ ಆವಾರದಲ್ಲಿ ವಿಶ್ವ ಏಡ್ಸ್ ದಿನಾಚಾರಣೆ ಕಾರ್ಯಕ್ರಮ: ಜಾಗೃತಿ ಕಾರ್ಯಕ್ರಮ

ಸಿದ್ದಾಪುರ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ತಾಲ್ಲೂಕು ಆಸ್ಪತ್ರೆಯ ಆವಾರದಲ್ಲಿ ವಿಶ್ವ ಏಡ್ಸ್ ದಿನಾಚಾರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಲಕ್ಷ್ಮಿಕಾಂತ್ ಎನ್ ನಾಯ್ಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಜಾಗೃತಿ ಹೊಂದುವುದೊoದೇ ಹೆಚ್ ಐ ವಿ ಯಿಂದ ಪಾರಾಗುವ ಉತ್ತಮ ಮಾರ್ಗವಾಗಿದೆ. ಈ ಕುರಿತು ಸಾರ್ವಜನಿಕರು ಜಾಗೃತರಾಗಬೇಕು ಎಂದರು.

ಡಾ. ಸ್ಪೂರ್ತಿ ಮಾತನಾಡಿ ಪ್ರತೀಯೊಬ್ಬ ಗರ್ಭಿಣಿ ಮಹಿಳೆಯರು ತಪ್ಪದೇ ಹೆಚ್ ಐ ವಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಗರ್ಭಿಣಿ ಸೋಂಕಿಗೆ ಒಳಗಾಗಿರುವುದು ಪತ್ತೆಯಾದರೂ ಸಹ ಆರೋಗ್ಯವಂತ ಮಗುವಿನ ಜನನಕ್ಕೆ ಅವಕಾಶ ಮಾಡಿಕೊಡಬಹುದು ಎಂದರು. ನಂತರ ಪಟ್ಟಣದಲ್ಲಿ ಜಾಥಾ ಸಂಚರಿಸಿ ಬಸ್ ನಿಲ್ಧಾಣ, ಆಟೋ ಸ್ಟಾಂಡ್, ಮಾರುಕಟ್ಟೆ ಹಾಗೂ ಜನ ಸಂದಣಿ ಪ್ರದೇಶಗಳಲ್ಲಿ ಜನರಿಗೆ ಮಾಹಿತಿ ಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು. ಆಡಳಿತ ವೈದ್ಯಾದಿಕಾರಿ ಡಾ.ರಾಘವೇಂದ್ರ ಉಡುಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕುಮಾರ್ ನಾಯ್ಕ , ಶಿಕ್ಷಣ ಇಲಾಖೆಯ ಮಹೇಶ್ ಹೆಗಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಆಪ್ತ ಸಮಾಲೋಚಕ ಜಗದೀಶ್ ನಾಯ್ಕ ಕಾರ್ಯಕ್ರಮ ಆಯೋಜಿಸಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್ ಕುಮಾರ್.ಸಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ, ತಾಲ್ಲೂಕು ಆಸ್ಪತ್ರೆಯ ವೈದ್ಯರು, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ನೌಕರರು, ಆಶಾ ಕಾರ್ಯಕರ್ತೆಯರು , ಆಸ್ಪತ್ರೆಯ ಐ ಸಿ ಟಿ ಸಿ ಹಾಗೂ ಎ ಆರ್ ಟಿ . ಡಿ ಎಮ್ ಸಿ ವಿಭಾಗದ ಎಲ್ಲಾ ಸಿಬ್ಬಂದಿಗಳು ಹಾಗೂ ಎನ್ ಜಿ ಒ ಸಿಬ್ಬಂದಿಗಳು ಭಾಗವಹಿಸಿದ್ದರು.

ವಿಸ್ಮಯ ನ್ಯೂಸ್, ಸಿದ್ದಾಪುರ

Back to top button