Follow Us On

WhatsApp Group
Important
Trending

ಪರಿಷತ್ ಚುನಾವಣಾ ಪ್ರಚಾರಕಣದಿಂದ ದೂರವುಳಿದಿರುವುದಕ್ಕೆ ಸ್ಪಷ್ಟನೆ ನೀಡಿದ ಸಂಸದ ಅನಂತಕುಮಾರ ಹೆಗಡೆ

ಕಾರವಾರ: ವಿಧಾನಪರಿಷತ್ ಚುನಾವಣಾ ಪ್ರಚಾರಕಣದಿಂದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ದೂರವುಳಿದಿರುವುದರ ಕುರಿತು ಇದೀಗ ಸ್ಪಷ್ಟನೆ ನೀಡಿದ್ದಾರೆ.

ಪರಿಷತ್ ಚುನಾವಣೆ ಘೋಷಣೆಯಾದಾಗಿನಿಂದ ಪೂರ್ವ ನಿಗದಿತ ಕಾರ್ಯಕ್ರಮಗಳು ಇದ್ದವಯ. ಅಲ್ಲದೆ, ಬೆಂಗಳೂರು, ಮೈಸೂರು ಮತ್ತು ತಮಿಳುನಾಡು ಪ್ರವಾಸದಲ್ಲಿದ್ದೆ.

ಇನ್ನು ನವೆಂಬರ್ 29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಸಂಸತ್ತಿನ ಕಲಾಪಗಳಲ್ಲಿಭಾಗವಹಿಸುತ್ತಿರುವುದರಿಂದ ಅನಿವಾರ್ಯವಾಗಿ ಹೊರಗುಳಿಯಬೇಕಾಗಿ ಬಂದಿದೆ. ನಮ್ಮ ಗೆಲುವಿಗೆ ಶಾಸಕರು, ಉಸ್ತುವಾರಿ ಮಂತ್ರಿಗಳು ಹಾಗೂ ಇನ್ನಿತರ ಮುಖಂಡರುಗಳು ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ.ಮ ಎಂದರು.

ನಮ್ಮ ಅಭ್ಯರ್ಥಿಯ ಗೆಲುವಿಗೆ ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯಗಳೇ ಅಭ್ಯರ್ಥಿ ಗೆಲುವಿಗೆ ಪೂರಕವಾಗಲಿದೆ. ಈ ಬಾರಿ ಗಣಪತಿ ಉಳ್ಳೇಕರ್‌ ಅವರು ಮೇಲ್ಮನೆಯನ್ನು ಪ್ರವೇಶಿಸುವುದು ನಿಶ್ಚಿತ ಎಂದಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button