ಕಾರವಾರ: ಓಮಿಕ್ರಾನ್ ಕೊವಿಡ್ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ಡಿಸೆಂಬರ್ 03 ರಂದು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೊಸ ಮಾರ್ಗಸೂಚಿ ಪ್ರಕಾರ ವಿದೇಶದಿಂದ ಬರುವವರಿಗೆ ವಿಮಾನ ನಿಲ್ದಾಣದಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ. ಇನ್ನು ಎರಡು ಡೋಸ್ ವ್ಯಾಕ್ಸಿನೇಷನ್ ಆಗಿದ್ದರೆ ಮಾತ್ರ ಮಾಲ್, ಥಿಯೇಟರ್ಗಳಿಗೆ ಎಂಟ್ರಿ ಸಿಗಲಿದೆ.ಮದುವೆಯಲ್ಲಿ 500 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಉಳಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳ ಪೋಷಕರಿಗೆ ವ್ಯಾಕ್ಸಿನೇಷನ್ ಕಡ್ಡಾಯವಾಗಿದ್ದು, ಕೇರಳ, ಮಹಾರಾಷ್ಟ್ರದಿಂದ ಬರುವವರೆಗೆ ಆರ್ಟಿಪಿಸಿಆರ್ ವರದಿ ತರುವುದು ಕಡ್ಡಾಯವಾಗಿದೆ. ಶಾಲಾ ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಬಾರದು ಎಂದು ಸೂಚಿಸಲಾಗಿದೆ.
ಕುಮಟಾ ಪುರಸಭೆಯ ಸಾರ್ವಜನಿಕ ಪ್ರಕಟಣೆ: ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ 18 ವರ್ಷ ಮೇಲ್ಪಟ್ಟ ಎಲ್ಲರೂ ಹಾಗೂ ಎರಡನೇ ಡೊಸ್ ಪಡೆಯಲು ಅವಧಿ ಪೂರೈಸಿ ಬಾಕಿ ಇರುವವರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಲೇ ಬೇಕಾಗುತ್ತದೆ.
ಆದ್ದರಿಂದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಕುಮಟಾ ಮತ್ತು ಸರ್ಕಾರಿ ಉರ್ದು ಶಾಲೆ ವನ್ನಳ್ಳಿ ಇಲ್ಲಿ ದಿನಾಂಕ 4/12/2021 ರ ಸಮಯ ಬೆಳಿಗ್ಗೆ 9 ರಿಂದ ಸಂಜೆ 5 ವರೆಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕಾ ಮಹಾಮೇಳ ನಡೆಯಲಿದೆ.
ಆದ್ದರಿಂದ ಲಸಿಕೆ ಪಡೆಯಲು ಬಾಕಿ ಇರುವವರು ಕಡ್ಡಾಯವಾಗಿ ಪಡೆದು ಕೊಳ್ಳುವಂತೆ ಅಂತಿಮವಾಗಿ ಸೂಚಿಸಿದೆ. ಇದು ತಾಲೂಕು ಆಡಳಿತ ಕುಮಟಾ ಇದರ ಸಾರ್ವಜನಿಕ ಪ್ರಕಟಣೆಯಾಗಿರುತ್ತದೆ
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್