ಕಾಳಿ ನದಿಯ ಮೂಲಕ ಕಾರವಾರಕ್ಕೆ ದೋಣಿಯಲ್ಲಿ ಮದ್ಯಸಾಗಾಟ: ತಲೆ ಮರೆಸಿಕೊಂಡ ಆರೋಪಿಗಾಗಿ ತೀವ್ರ ಶೋಧ

ಕಾರವಾರ: ಗೋವಾದಿಂದ ಸಮುದ್ರ ಹಾಗೂ ಕಾಳಿ ನದಿಯ ಮೂಲಕ ಕಾರವಾರಕ್ಕೆ ದೋಣಿಯಲ್ಲಿ ಮದ್ಯಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಅಕ್ರಮ ಮದ್ಯ ಹಾಗೂ ನಾಡದೋಣಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ತಾರೀವಾಡಾ ಬಳಿ ದಾಳಿ ನಡೆಸಿದ್ದಾಗ ಅಕ್ರಮ ಮದ್ಯ ಸಾಗಾಟ ಬೆಳಕಿಗೆ ಬಂದಿದೆ.

ದಾಳಿ ವೇಳೆ ಸುಮಾರು 70 ಸಾವಿರ ರೂಪಾಯಿ ಮೌಲ್ಯದ ಮದ್ಯ ಹಾಗೂ 50 ಸಾವಿ ರೂಪಾಯಿ ಮೌಲ್ಯದ ಸಾರಾಯಿ ಸಾಗಾಟಕ್ಕೆ ಬಳಸಿದ್ದ ನಾಡಗೋಣಿ ಸಮೇತ ವಶಕ್ಕೆ ಪಡೆಯಲಾಗಿದೆ. ಆರೋಪಿ ತಲೆ ಮರೆಸಿಕೊಂಡಿದ್ದು , ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version