ಭಟ್ಕಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಎರಡು ಸ್ಕೂಟಿಗಳ ನಡುವೆ ಡಿಕ್ಕಿ ಸಂಭವಿಸಿ ಅಪಘಾತವಾದ ಘಟನೆ ಉಸ್ಮಾನ ನಗರ ಕ್ರಾಸ್ ನಮೀಪ ನಡೆದಿದೆ. ಉಸ್ಮಾನ ನಗರ ಕ್ರಾಸನಿಂದ ಬೆಳಖಂಡ ರಸ್ತೆಗೆ ತೆರಳುತ್ತಿದ್ದ ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆಯೊಬ್ಬಳು ಹಾಗೂ ಭಟ್ಕಳ ಸರ್ಕಲ್ ನಿಂದ ಬೆಳಕೆ ಕಡೆ ಹೋಗುತ್ತಿದ್ದ ಬೈಕ ಸವಾರನ ನಡುವೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಎರಡೂ ಸ್ಕೂಟಿ ಸವಾರರು ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಟ್ಕಳದಲ್ಲಿ ಆಗುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯೇ ಈ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರದಂದು ಕೂಡ ಇದೆ ಸ್ಥಳದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.
ದಿನದಿoದ ದಿನಕ್ಕೆ ಉಸ್ಮಾನ ನಗರದಿಂದ ಮಣ್ಕುಳಿ ಯವರಿಗೆ ರಸ್ತೆ ಅಪಘಾತ ಹೆಚ್ಚಾಗುತ್ತಿದೆ. ಚತುಷ್ಪಥ ಹೆದ್ದಾರಿಗೆ ಸೇರುವ ಒಳರಸ್ತೆಗಳ ಬಳಿ ಯಾವುದೇ ಸೂಚನಾ ಫಲಕ ಹಾಗೂ ಬ್ಯಾರಿಕೇಡ್ ಇಲ್ಲದ ಕಾರಣ ರಸ್ತೆ ಅಪಘಾತ ಹೆಚ್ಚಾಗುತ್ತಿರುವುದು ಒಂದು ಕಾರಣವಾದರೆ, ಚತುಷ್ಪತ ಹೆದ್ದಾರಿಗೆ ಸೇರುವ ಒಳ ರಸ್ತೆಯು ಚತುಷ್ಪತ ಹೆದ್ದಾರಿಗಿಂತ ಕೆಳ ಭಾಗದಲ್ಲಿರುವುದು ಅಪಘಾತ ಹೆಚ್ಚಲು ಇನ್ನೊಂದು ಕಾರಣವಾಗಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091