Follow Us On

WhatsApp Group
Focus News
Trending

ಭಗವದ್ಗೀತಾ ಅಭಿಯಾನ: ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು

ಶಿರಸಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನವು ಶ್ರೀ ಭಗವದ್ಗೀತಾ ಅಭಿಯಾನ 2021ರ ಅಂಗವಾಗಿ ಲಯನ್ಸ್ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಸ್ಪರ್ಧೆಗಳಲ್ಲಿ ಚಂದನ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಯಶಸ್ವಿನಿ ಹೆಗಡೆ (ಹಿರಿಯರ ವಿಭಾಗ, ಕಂಠಪಾಠ ಸ್ಪರ್ಧೆ), 5ನೇ ತರಗತಿಯ ವರ್ಷಿಣಿ ಹೆಗಡೆ (ಕಿರಿಯರ ವಿಭಾಗ, ಕಂಠಪಾಠ) ಹಾಗೂ ಅನ್ವಿತಾ ಹೆಗಡೆ(ಕಿರಿಯರ ವಿಬಾಗ, ಭಾಷಣ ಸ್ಪರ್ಧೆ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ಸಿಂಧೂರ್ ಭಟ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ. ಶಿಕ್ಷಕ ಸಿಂಧೂರ್ ಭಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

ವಿಸ್ಮಯ ನ್ಯೂಸ್, ಶಿರಸಿ

Back to top button